August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿದ ಮಂಗಳೂರು ಹೊಯ್ಸಳ – 5 ಪೊಲೀಸರು

ಆಟೋ ಬಾಡಿಗೆ ವಿಚಾರದಲ್ಲಿ ಇಡೀ ಮಂಗಳೂರು ಮಹಾನಗರ ಪಾಲಿಕೆ ಪ್ರದೇಶದಲ್ಲಿ ಪ್ರತಿದಿನ ಏರಿದ ಸ್ವರದಲ್ಲಿ ಚರ್ಚೆ, ಗಲಾಟೆ, ಹಾಗೂ ಕೈ ಕೈ ಮಿಲಾಯಿಸಿ ಜಗಳ ಆಡುವುದು ಇತ್ತೀಚೆಗೆ ಸರ್ವೇಸಾಮಾನ್ಯವಾಗಿ ಹೋಗಿದೆ. ಇಂತಹದೇ ಒಂದು ಜಗಳವು ಏಪ್ರಿಲ್ 20ರಂದು ಆದಿತ್ಯವಾರ ರಾತ್ರಿ 11 ಗಂಟೆಗೆ ವೆನ್ಲಾಕ್ ಆಸ್ಪತ್ರೆಯ ಪಕ್ಕದಲ್ಲಿ ನಡೆದಿದ್ದು, ಈ ಬಗ್ಗೆ ಆಸ್ಪತ್ರೆಯಿಂದ ಪೊಲೀಸರ ಹೊಯ್ಸಳದ 112ಕ್ಕೆ ದೂರು ಬಂತು.

ಪೊಲೀಸರು ಕೂಡಲೇ ಸ್ಥಳಕ್ಕೆ ತಲುಪಿ ಬಾಡಿಗೆ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದ ಇಬ್ಬರು ಯುವಕರ ಜಗಳವನ್ನು ನಿಲ್ಲಿಸಿ, ಅವರಿಗೆ ಸೂಕ್ತ ತಿಳುವಳಿಕೆಯನ್ನು ನೀಡಿ ಈ ಸಮಸ್ಯೆಯನ್ನು ಸೌಹಾರ್ದವಾಗಿ ಬಗೆಹರಿಸಲಾಗಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page