May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ಮಂಗಳೂರು ಧರ್ಮಕ್ಷೇತ್ರದ ಪರವಾಗಿ ಸಂತಾಪ ವ್ಯಕ್ತಪಡಿಸಿದರು.

ಕೊಡಿಯಾಲ್ ಬೈಲಿನಲ್ಲಿರುವ ಬಿಷಪ್ಸ್ ಹೌಸ್‌ಗೆ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತೆರಳಿ ಪೋಪ್ ರವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಅಂತಿಮ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಷಪ್ ಉಪಸ್ಥಿತರಿದ್ದು ಪ್ರಾರ್ಥನೆಯನ್ನು ಸಲ್ಲಿಸಿದರು.

ಹನ್ನೆರಡು ವರ್ಷಗಳ ಕಾಲ ಪೋಪ್ ಆಗಿ ಸೇವೆ ಸಲ್ಲಿಸಿ ಪ್ರಪಂಚದೆಡೆ ಶಾಂತಿಯ ಸಂದೇಶವನ್ನು ಸಾರಿದ ಪೋಪ್ ಪ್ರಾನ್ಸಿಸ್ ರವರು ಜಗತ್ತಿನ ರೋಮನ್ ಕ್ಯಾಥೋಲಿಕ್ ಸಮುದಾಯದ ಏಕತೆಗಾಗಿ ಮತ್ತು ಪ್ರೀತಿ ವಿಶ್ವಾಸದ ಮೂಲಕ ಪ್ರಪಂಚವನ್ನು ಗೆಲ್ಲಬಹುದು ಎಂದು ಸಾರಿದ ಸಂದೇಶವನ್ನು MLC ಐವನ್ ಡಿಸೋಜ ಸ್ಮರಿಸಿದರು.

ಅಂತಿಮ ನಮನ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರುಗಳಾದ ಮನುರಾಜ್ ವಿಕಾಸ್ ಶೆಟ್ಟಿ, ಸಿರಾಜ್ ಬಜ್ಪೆ, ಯೋಗೇಶ್ ನಾಯಕ್, ನಿಸಾರ್ ಬಜಪೆ, ಕಥೊಲಿಕ್ ಸಭಾ ಸಿಟಿ ವಲಯದ ಅಧ್ಯಕ್ಷ ಅರುಣ್ ಡಿಸೋಜ ಜೊತೆಗಿದ್ದರು.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page