July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಗೊನೆ ಮುಹೂರ್ತ

ಬಂಟ್ವಾಳ ತಾಲೂಕು ನೆಟ್ಲಮುಡ್ನೂರು ಹಾಗೂ ಅನಂತಾಡಿ ಉಭಯ ಗ್ರಾಮಗಳಿಗೆ ಸಂಬಂದಪಟ್ಟ ಇತೀಹಾಸ ಪ್ರಸಿದ್ಧ ಕರಿಂಕ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದ ವರ್ಷಾವಧಿ ಜಾತ್ರೆಯು ಬ್ರಹ್ಮ ಶ್ರೀ ವೇ.ಮೂ. ನಿಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿವರ್ಯರ ನೇತೃತ್ವದಲ್ಲಿ ಮೇ 01ರಿಂದ ಗುರುವಾರ ರಾತ್ರಿ ಹಾಗೂ ಮೇ 02ನೇ ಶುಕ್ರವಾರದಂದು ವೈಭವದಿಂದ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ನಡೆಯುವ ಗೊನೆ ಕಡಿಯುವ ಮೂಹೂರ್ತವನ್ನು ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಇವರು ಇಂದು ಬೆಳಿಗ್ಗೆ 9.45ರ ಸುಮುಹೂರ್ತದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನರೇಂದ್ರ ರೈಯವರು ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯ ಕಿರಣ್ ಹೆಗ್ಡೆ, ಸೇಸಪ್ಪ ಗೌಡ ಉಪಸ್ಥಿತರಿದ್ದರು. ನೆಟ್ಲಮುಡ್ನೂರು ಗ್ರಾಮದ ಶ್ರೀ ಕ್ಷೇತ್ರದ ಭಕ್ತ ಬಿ. ಚೇತನ್ ರೈ, ಡಾ. ಮನೋಹರ ರೈ, ಜಗನ್ನಾಥ ಶೆಟ್ಟಿ ಕರಿಂಕ, ಚೇತನ್ ಶೆಟ್ಟಿ ಹೊಸ ಒಕ್ಲು, ದಾಮೋದರ ಕಾಪಿಕ್ಕಾಡ್, ಜತ್ತಪ್ಪ ಪೂಜಾರಿ, ಕರಿಂಕ ಡೊಂಬಯ್ಯ ಗೌಡ ಕರಿಂಕ ಹಾಗೂ ದೇವಸ್ಥಾನದ ಪ್ರಭಂಧಕರಾದ ಗೌರೀಶ್ ಶೆಟ್ಟಿಯವರು ಉಪಸ್ಥಿತರಿದ್ದರು.

ದಿನಾಂಕ 01-02-205ನೇ ಗುರುವಾರ ರಾತ್ರಿ ಗಂಟೆ 8ರಿಂದ ಮಹೋತ್ಸವ ಬಲಿ, ಭೂತ ಬಲಿ ನಡೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆದು, ಜಿಲ್ಲೆಯ ಹೆಸರಾಂತ ಕಲಾವಿದರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಮರುದಿನ ಬೆಳಿಗ್ಗೆ ಗಂಟೆ 9.30ರಿಂದ ಹಗಲು ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣದಲ್ಲಿ ಪ್ರಸಾದ ವಿತರಣೆ ನಡೆದು ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆದು, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.

ಅಂತೆಯೇ ತಾರೀಕು 12-05-2025 ನೇ ಸೋಮವಾರ ಬೆಳಿಗ್ಗೆ ಗಂಟೆ 9ರಿಂದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಪ್ರಯುಕ್ತ ಗಣಪತಿ ಹೋಮ, ಕಲಶಾಭಿಷೇಕ ನಡೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆದು ರಾತ್ರಿ ಗಂಟೆ 7ರಿಂದ ಮಹಾ ರಂಗಪೂಜೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಕ್ಷೇತ್ರದ ಭಕ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ. ನರೇಂದ್ರ ರೈಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page