September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರೈಲ್ವೆ ಪರೀಕ್ಷೆ – ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆ – ಸಚಿವ ಸೋಮಣ್ಣ

ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆ ಇಡೀ ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದು, ಇದೀಗ ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣವೇ, ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು.

‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್‌ ಟಿಕೆಟ್‌ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯ ಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಎಕ್ಸ್ ಸಂದೇಶದ ಮೂಲಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಸ್ಪಷ್ಟಪಡಿಸಿದ್ದಾರೆ.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page