July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

2024-25ನೇ ಸಾಲಿನ  SSLC ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ

ಈ ಬಾರಿ ಶೇಕಡ 66.14 ಫಲಿತಾಂಶ ದಾಖಲು

2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಮೇ 2ರಂದು ಶುಕ್ರವಾರ ಪ್ರಕಟವಾಗಿದ್ದು, ಈ ಬಾರಿ ಶೇ 66.14 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ಮಾರ್ಚ್ – ಎಪ್ರಿಲ್ ತಿಂಗಳಲ್ಲಿ 2024-25ನೇ ಸಾಲಿನ SSLC ಪರೀಕ್ಷೆ-1 ನಡೆದಿದ್ದು, ಇಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಅತೀ ಹೆಚ್ಚು ಫಲಿತಾಂಶ ಬಂದಿದೆ. 91.12 ಶೇಕಡಾದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, 89.96 ಶೇಕಡಾದೊಂದಿಗೆ ಉಡುಪಿ ದ್ವಿತೀಯ ಹಾಗೂ 83.19 ಶೇಕಡಾದೊಂದಿಗೆ ಉತ್ತರ ಕನ್ನಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಕಲಬುರ್ಗಿ ಕೊನೆ ಸ್ಥಾನ ಪಡೆದಿದೆ. ಈ ಬಾರಿ 22 ಮಂದಿ 625 ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ ಆದ https://kseab.karnataka.gov.in ಅಥವಾ https://karresults.nic.in ನಲ್ಲಿ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ತಮ್ಮ ಎಸ್ಸೆಸ್ಸೆಲ್ಸಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ಹಾಗೂ ಅಂಕಪಟ್ಟಿ ಪ್ರತಿಯನ್ನು ಪಡೆದುಕೊಳ್ಳಬಹುದು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page