July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ ಸಾವಿರಾರು ಜನರಿಂದ ಸುಹಾಸ್ ಶೆಟ್ಟಿಗೆ ಅಂತಿಮ ನಮನ

ಬಜ್ಪೆಯಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿಗೆ ಅಂತಿಮ ನಮನ ಸಲ್ಲಿಸಲು ಬಂಟ್ವಾಳದ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಡಲಾಗಿತ್ತು. ಈ ವೇಳೆ ಜನಸಾಗರವೇ ಹರಿದು ಬಂತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡುಗುತ್ತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರ ಹಲವಾರು ನಾಯಕರು ಸ್ಥಳದಲ್ಲಿ ಉಪಸ್ಥಿತರಿದ್ದರು. IG ಅಮಿತ್ ಸಿಂಗ್, SP ಯತೀಶ್ ಎನ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತಪದ್ಮನಾಭ ಮತ್ತು SI ರಾಮಕೃಷ್ಣರವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಬಂಟ್ವಾಳದಲ್ಲಿಯೇ ಇದ್ದರು.

ಸುಹಾಸ್ ಶೆಟ್ಟಿ ಅಂತ್ಯಕ್ರಿಯೆಯ ಮೆರವಣಿಗೆ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದ ಖಾಸಗಿ ಆಸ್ಪತ್ರೆಯಿಂದ ಪ್ರಾರಂಭವಾಗಿ ಅವರ ಹುಟ್ಟೂರಾದ ಬಂಟ್ವಾಳದ ಕಾರಿಂಜಕ್ಕೆ ತೆರಳಿತು. ಮೆರವಣಿಗೆಯಲ್ಲಿ ದೊಡ್ಡ ಜನಸಮೂಹವೇ ಭಾಗವಹಿಸಿತ್ತು.

 

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page