September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ವಕೀಲರ ಸಂಘ (ರಿ.) ಇದರ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರ್ ಆಯ್ಕೆ

ಬಂಟ್ವಾಳದ ವಕೀಲರ ಸಂಘ (ರಿ.) ಇದರ 2025-27ನೇ ಸಾಲಿನ ಚುನಾವಣೆಯು ಮೇ 3ರಂದು ಶನಿವಾರ ಸಂಘದ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ.ರವರು 123 ಮತಗಳನ್ನು ಪಡೆದು ಬಹುಮತದಿಂದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರದಾನ ಕಾರ್ಯದರ್ಶಿಯಾಗಿ ಕೆ. ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ವಕೀಲರಾದ ಎಚ್. ಸತೀಶ್ ರಾವ್ ರವರು ಮುಖ್ಯ ಚುನಾವಣಾಧಿಕಾರಿಯಾಗಿದ್ದು, ಕೆ.ವಿ. ಭಟ್ ಮತ್ತು ಎಂ.ವಿ. ಭಟ್ ರವರು ಉಪ ಚುನಾವಣಾಧಿಕಾರಿಗಳಾಗಿದ್ದರು. ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯರವರ ಮೇಲುಸ್ತುವಾರಿಯಲ್ಲಿ ಮತದಾನ ಪ್ರಕ್ರಿಯೆ ನಡೆದಿರುತ್ತದೆ.

You may also like

News

ಕಲ್ಲುಗುಂಡಿ ದರೋಡೆ ಪ್ರಕರಣದಲ್ಲಿ ಶ್ರೀನಿವಾಸ ದೋಷಮುಕ್ತ

ಆರೋಪಿ ಪರ ಪ್ರಖ್ಯಾತ ವಕೀಲರಾದ ಪುತ್ತೂರು ಮಹೇಶ್ ಕಜೆ ಯಶಸ್ವಿ ವಾದ ಪುತ್ತೂರು: ಸುಮಾರು 13 ವರ್ಷಗಳ ಹಿಂದೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ
News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ

You cannot copy content of this page