July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ PSI

ಬೆಂಗಳೂರು ನಗರದ ಕೆಂಪೇಗೌಡನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಗಳ ಪರವಾಗಿ ವರದಿ ಸಲ್ಲಿಸಲು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಠಾಣೆಯ PSI ಮತ್ತು PI ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.


ಆವಲಹಳ್ಳಿ ನಿವಾಸಿ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಅವರ ಹೆಸರನ್ನು ಕೈಬಿಡಲು PI ಶಿವಾಜಿ ರಾವ್ ಮತ್ತು PSI ಶಿವಾನಂದ ಜಿ. 6 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕೇಶವಮೂರ್ತಿರವರು ಲೋಕಾಯಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಡಿವೈಎಸ್‌ಪಿ ಗಿರೀಶ್‌ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ರೂಪಿಸಲಾಗಿತ್ತು. ಲೋಕಾಯುಕ್ತ ಪೊಲೀಸರ ಸೂಚನೆಯಂತೆ ಕೇಶವಮೂರ್ತಿ ಅವರು ಕೆಂಪೇಗೌಡ ನಗರ ಪೊಲೀಸ್‌ ಠಾಣೆಯ ಬಳಿಯಲ್ಲೇ PI ಮತ್ತು PSI ರವರಿಗೆ ಒಂದು ಲಕ್ಷ ರೂಪಾಯಿ ನೀಡಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಿದರು. 1 ಲಕ್ಷ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

You may also like

News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ
News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು

You cannot copy content of this page