August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ

ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರ ಮಾರ್ಗದರ್ಶನದಲ್ಲಿ ನಡೆದ ಚುನಾವಣೆ

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನದಲ್ಲಿ ಇಂದು ಮೇ 11ರಂದು ಆದಿತ್ಯವಾರ ನಡೆಯಿತು. ನೂತನ ಕೇಂದ್ರೀಯ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಸರ್ವಾನುಮತದಿಂದ ಆಯ್ಕೆಯಾದರು.

ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರು ಚುನಾವಣೆಯ ಮೊದಲು ನೂತನ ಪೋಪ್ ಲಿಯೋ 14ರವರ ಚುನಾವಣೆಯನ್ನು ಸ್ಮರಿಸಿ ಅದೇ ರೀತಿ ಪ್ರಾರ್ಥನೆಯ ಮೂಲಕ ಚುನಾವಣೆಯನ್ನು ನಡೆಸಲು ಮಾರ್ಗದರ್ಶನ ನೀಡೀದರು. ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, ಪ್ರಥಮ ಉಪಾಧ್ಯಕ್ಷ ಲೋರೆನ್ಸ್ ಡಿಸೋಜ ಸುರತ್ಕಲ್, ದ್ವಿತೀಯ ಉಪಾಧ್ಯಕ್ಷ ಲಿಯೋ ರೊಡ್ರಿಗಸ್ ಮಡಂತ್ಯಾರ್, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೇರೊ ದೇರೆಬೈಲ್, ಸಹ ಕಾರ್ಯದರ್ಶಿ ಆಲ್ವಿನ್ ರೊಡ್ರಿಗಸ್ ಮೂಡಬಿದಿರೆ ಅಲಂಗಾರ್, ಖಜಾಂಚಿ ಫ್ರಾನ್ಸಿಸ್ ಮೊಂತೇರೊ ಮರಿಯಾಶ್ರಮ್ ತಲಪಾಡಿ, ಸಹ ಖಜಾಂಚಿ ಲವೀನಾ ಗ್ರೆಟ್ಟಾ ಡಿಸೋಜ ರಾಣಿಪುರ ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾದರು.

ಮಾಜಿ ಅಧ್ಯಕ್ಷ ಲ್ಯಾನ್ಸಿ ಡಿಕುನ್ಹಾ ಚುನಾವಣಾಧಿಕಾರಿಯಾಗಿ ಮತ್ತು ಜೆರಿ ಪೀಟರ್ ರೊಡ್ರಿಗಸ್ ಚುನಾವಣಾ ವೀಕ್ಷಣಾಧಿಕಾರಿಯಾಗಿ ಚುನಾವಣೆಯನ್ನು ನಡೆಸಿಕೊಟ್ಟರು. ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ, ನಿಕಟ ಪೂರ್ವ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ಮಾಜಿ ಕೇಂದ್ರೀಯ ಅಧ್ಯಕ್ಷರುಗಳಾದ ವಾಲ್ಟರ್ ಡಿಸೋಜ, ಮಾರಿಟೊ ಸಿಕ್ವೇರಾ, ಎಲ್.ಜೆ. ಫೆರ್ನಾಂಡಿಸ್, ಜೆರಾಲ್ಡ್ ಡಿಕೋಸ್ತ, ಜೆರಿ ಪೀಟರ್ ರೊಡ್ರಿಗಸ್, ಆಂಡ್ರು ನೊರೊನ್ಹಾ, ಲ್ಯಾನ್ಸಿ ಡಿಕುನ್ಹಾ, ನೈಜಿಲ್ ಪಿರೇರಾ, ಅನಿಲ್ ಲೋಬೊ, ಪ್ಲೇವಿ ಡಿಸೋಜ,  ಪಾವ್ಲ್ ರೋಲ್ಫಿ ಡಿಕೋಸ್ತ, ಸ್ಟ್ಯಾನಿ ಲೋಬೊ, ವಲಯ ಅಧ್ಯಕ್ಷರುಗಳಾದ ರೋಷನ್ ಬೊನಿಫಾಸ್ ಮಾರ್ಟಿಸ್, ಲಿಯೋ ಸಿಕ್ವೇರಾ, ಸ್ಟ್ಯಾನಿ ಮಿರಾಂದ, ಆಲ್ಬರ್ಟ್ ಸುನಿಲ್ ಮೊನಿಸ್, ಜೋನ್ ಲಸ್ರಾದೊ, ಐಡಾ ಫುಡ್ತಾದೊ, ಡೋಲ್ಫಿ ಡಿಸೋಜ, ಜೆರಾಲ್ಡ್ ಮಸ್ಕರೇನ್ಹಸ್ ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page