August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ನ್ಯಾಯಾಧೀಶರಾದ ಭಾಗ್ಯಮ್ಮರವರಿಗೆ ಗೌರವಾಭಿನಂದನೆ ಹಾಗೂ ಬೀಳ್ಕೊಡುಗೆ ಸಮಾರಂಭ

ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಬಂಟ್ವಾಳ ಇಲ್ಲಿ ಕರ್ತವ್ಯ ನಿರ್ವಹಿಸಿದ ನ್ಯಾಯಧೀಶರಾದ ಭಾಗ್ಯಮ್ಮರವರಿಗೆ ಹುಣಸೂರು ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದು ಈ ನಿಟ್ಟಿನಲ್ಲಿ ವಕೀಲರ ಸಂಘ (ರಿ.) ಬಂಟ್ವಾಳ ಇವರ ವತಿಯಿಂದ ಗೌರವಾಭಿನಂದನೆ ಮತ್ತು ಬೀಳ್ಕೊಡುಗೆ ಸಮಾರಂಭ ಇಂದು ಮೇ 22ರಂದು ಗುರುವಾರ ನ್ಯಾಯಾಲಯದಲ್ಲಿ ನಡೆಯಿತು.

ಭಾಗ್ಯಮ್ಮರವರು ಮೂರು ವರ್ಷಗಳ ಕಾಲ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ವೇಳೆ ತನ್ನನ್ನು ಸನ್ಮಾನಿಸಿದ ಬಾರ್ ಅಸೋಸಿಯೇಷನ್ ಗೆ ನ್ಯಾಯಧೀಶೆ ಭಾಗ್ಯಮ್ಮ ಧನ್ಯವಾದ ಸಲ್ಲಿಸಿದರು. ವಕೀಲರ ಸಂಘ (ರಿ.) ಬಂಟ್ವಾಳದ ಅಧ್ಯಕ್ಷ ರಿಚರ್ಡ್ ಕೋಸ್ತಾ ಎಂ.ರವರು ನ್ಯಾಯಾಧೀಶೆ ಭಾಗ್ಯಮ್ಮರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭ ವೇದಿಕೆಯಲ್ಲಿ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್., ಪ್ರದಾನ ಕಾರ್ಯದರ್ಶಿ ಕೆ. ನರೇಂದ್ರ ನಾಥ್ ಭಂಡಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ದಯಾನಂದ ರೈ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಕೆ. ನರೇಂದ್ರ ಭಂಡಾರಿ ಧನ್ಯವಾದ ಸಮರ್ಪಿಸಿದರು. ಯುವ ವಕೀಲರಾದ ಸ್ವರ್ಣ ಗೌರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಕಿರಿಯ ವಕೀಲ ಮಿತ್ರರು ಉಪಸ್ಥಿತರಿದ್ದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page