May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಸಾವು – ಮೂವರು ಎಎಸ್​ಐಗಳು ಸಸ್ಪೆಂಡ್

ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳನ್ನು ಅಮಾನತು ಮಾಡಲಾಗಿದೆ. ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್​ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್​ಐಗಳನ್ನು ಅಮಾನತು ಮಾಡಿದ್ದಾರೆ. ಎಸ್​ಪಿ ಮಲ್ಲಿಕಾರ್ಜುನರವರು ಬಾಲದಂಡಿ ಅವರು ASIಗಳಾದ ಜಯರಾಮ್​, ನಾಗರಾಜ್​, ಗುರುದೇವ್ ಅಮಾನತುಗೊಂಡವರು.

ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿಯ 3 ವರ್ಷದ ಮಗಳು ಹೃತೀಕ್ಷಗೆ ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್‌ ಅನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಹಠಾತ್ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದಿನಿಂದ ಬಂದ ಟೆಂಪೋ ಮಗು ಹೃತೀಕ್ ಮೇಲ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಇದರಿಂದ ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳದಲ್ಲಿ ಇದ್ದ ಮೂವರು ಎಎಸ್​ಐಗಳನ್ನು ಸಸ್ಪೆಂಡ್ ಮಾಡಿದ್ದಾರೆ.

ಕಣ್ಣೆದುರಲ್ಲೇ ಸಾವನ್ನಪ್ಪಿದ ಮಗುವನ್ನು ಪೋಷಕರು ರಸ್ತೆಯ ಮಧ್ಯೆ ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ್ದಾರೆ. ಇನ್ನು ಈ ದೃಶ್ಯವನ್ನು ಕಂಡು ಕಂಡ ಸಾರ್ವಜನಿಕರು ಮಮ್ಮಲ ಮರುಗಿದ್ದು, ಪೊಲೀಸರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಘಟನೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೂ ತೊಂದರೆಯಾಯಿತು. ಇನ್ನು ಮೃತ ಮಗು ಹೃತೀಕ್ಷ ಸಾವು ಸಂಬಂಧ ಮಂಡ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

News

ವಾಣಿಜ್ಯ ಸಿಲಿಂಡರ್ ದರ ಏರಿಕೆ – ಕೇಂದ್ರದ ವಿರುದ್ಧ MLC ಐವನ್ ಡಿಸೋಜ ಆಕ್ರೋಶ

ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹991ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವು ಜನವಿರೋಧಿಯಾಗಿದ್ದು, ಇದನ್ನು ವಿಧಾನ ಪರಿಷತ್ ಸದಸ್ಯರಾದ ಐವನ್
News

ನೀರುಮಾರ್ಗ ಚರ್ಚ್‌ನಲ್ಲಿ ಸಂಭ್ರಮದ ‘ಸಮುದಾಯ ದಿನಾಚರಣೆ’ – ಇಂದು ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭೋಜನ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ನಲ್ಲಿ ಇಂದು ‘ಸಮುದಾಯ ದಿನಾಚರಣೆ’ಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಅಂಗವಾಗಿ ಚರ್ಚ್

You cannot copy content of this page