August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ನಗರ ಪೊಲೀಸ್ ಕಮಿಷನರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ವರ್ಗಾವಣೆ

ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗೂ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ನೇಮಕ

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಡಾ. ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಇಂದು ಮೇ 29ರಂದು ಗುರುವಾರ ಆದೇಶ ಹೊರಡಿಸಿದೆ.

ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ.ಐ.ಜಿ. ಆಗಿದ್ದರು. ಇವರು ವರ್ಗಾವಣೆಯಾಗಿರುವ ಅನುಪಮ್ ಅಗ್ರವಾಲ್ ರವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಉಡುಪಿ ಎಸ್ಪಿಯಾಗಿರುವ ಡಾ. ಅರುಣ್ ಕೆ. ಇವರು, ವರ್ಗಾವಣೆಯಾಗಿರುವ ಯತೀಶ್ ಎನ್. ರವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page