September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮನೆ ಮೇಲೆ ತಡೆಗೋಡೆ ಕುಸಿದು ಬಾಲಕಿ ಮೃತ್ಯು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ಎಂಬವರ ಪುತ್ರಿ 10 ವರ್ಷ ಪ್ರಾಯದ ಫಾತಿಮ ನಈಮ ಎಂದು ಗುರುತಿಸಲಾಗಿದೆ.

ಕಾನಕರೆಯಲ್ಲಿರುವ ನೌಶಾದ್ ರವರ ಮನೆಗೆ ಹಿಂಬದಿಯ ಗುಡ್ಡೆಗೆ ನಿರ್ಮಾಣವಾದ ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page