August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೇರಳದಿಂದ ಕರ್ನಾಟಕಕ್ಕೆ ಕಂಟೈನರ್ ನಲ್ಲಿ ಅಕ್ರಮ ಜಾನುವಾರು ಸಾಗಾಟ – ಪ್ರಕರಣ ದಾಖಲು

ಜಾನುವಾರುಗಳನ್ನು ರಕ್ಷಿಸಿ ಗೋ ಶಾಲೆಗೆ ನೀಡಿದ ಪೊಲೀಸರು

ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾದು ಹೋಗುವ ರಸ್ತೆಗಳಲ್ಲಿ ಜೂನ್ 1ರಂದು ಹೆಚ್ಚು ಚೆಕ್ ಪೋಸ್ಟ್‌ಗಳನ್ನು ತೆರೆದು ಬೆಳಗ್ಗಿನ ಜಾವ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್‌ ವಾಹನವನ್ನು ತಲಪಾಡಿ ಟೋಲ್ ಗೇಟ್ ಬಳಿ ಪತ್ತೆ ಹಚ್ಚಿ ವಾಹನದಲ್ಲಿದ ಆರೋಪಿಯನ್ನು ಬಂಧಿಸಿ ಕಂಟೈನರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದೆ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಂಟೈನರ್ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.

ಹೀಗೆ ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿರುತ್ತಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2025 ರಂತೆ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿರುತ್ತದೆ. ಸದರಿ ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ.

 

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page