July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ನಗರ ಪೊಲೀಸ್ ರಿಂದ ಟಿಂಟ್ ಗ್ಲಾಸ್ ಅಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ

ಅಪರಾಧಗಳನ್ನು ತಡೆಗಟ್ಟಲು ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 02 ಮತ್ತು 03ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ ಗಳಲ್ಲಿ ಬ್ಲ್ಯಾಕ್ ಫಿಲ್ಮ್ (ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣವನ್ನು ದಾಖಲಿಸಿ, ರೂಪಾಯಿ 1,11,500/- ದಂಡವನ್ನು ವಿಧಿಸಲಾಗಿದೆ. ಅಲ್ಲದೇ 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ ಗಳನ್ನು ವಾಹನ ಚಾಲಕರಿಂದ ತೆಗೆಸಿ ಸೂಕ್ತ ಕ್ರಮ ಕೈಗೊಂಡು ಅವರುಗಳಿಗೆ ತಿಳುವಳಿಕೆಯನ್ನು ಸಹ ನೀಡಲಾಗಿರುತ್ತದೆ.

ಅಲ್ಲದೇ ಇಂದು ಜೂನ್ 03ರಂದು ಮಂಗಳವಾರ ಪೊಲೀಸ್ ಆಯುಕ್ತಕರ ಕಛೇರಿಯ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ, ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರು ಶೋ ರೂಮ್, ಅಕ್ಸೆಸರಿಸ್ ಶಾಪ್, ಗ್ಯಾರೇಟ್, ಸ್ಟಿಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಹಾಜರಿದ್ದವರಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿತರು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ ಗಳನ್ನು ಅಳವಡಿಸದಂತೆ ಸೂಕ್ತ ಸೂಚನೆಗಳನ್ನು ಸಹ ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದೆ ಎಂದು ಸಿಟಿ ಪೊಲೀಸರು ಮಾದ್ಯಮಗಳಿಗೆ ತಿಳಿಸಿದ್ದಾರೆ.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page