April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ

ಪುತ್ತೂರು ಮೂಲದ ವಿದ್ಯಾರ್ಥಿನಿ ಚಿನ್ಮಯಿ ಶೆಟ್ಟಿ ದುರ್ಮರಣ

ಜೂನ್ 3ರಂದು ಮಂಗಳವಾರ ನಡೆದ IPL ಕ್ರಿಕೆಟ್ ಪಂದ್ಯಾವಳಿಯಲ್ಲಿ RCB (ರೊಯೆಲ್ ಚಾಲೆಂಜರ್ಸ್ ಬೆಂಗಳೂರು) ತಂಡದ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುತ್ತೂರು ಮೂಲದ ಯುವತಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತ ಯುವತಿಯನ್ನು 19 ವರ್ಷ ಪ್ರಾಯದ ಚಿನ್ಮಯಿ ಶೆಟ್ಟಿ ಇಂಜಿನೀಯರಿಂಗ್ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಚಿನ್ಮಯಿ ಶೆಟ್ಟಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದ ನಿವಾಸಿಯಾಗಿದ್ದಳು. ಇವಳು ಕರುಣಾಕರ ಶೆಟ್ಟಿ ಮತ್ತು ಪೂಜಾ ದಂಪತಿಯ ಪುತ್ರಿ.

ಚಿನ್ಮಯಿ ಶೆಟ್ಟಿ ಕಾಲೇಜಿನಿಂದ ತನ್ನ ಸ್ನೇಹಿತರೊಂದಿಗೆ RCB ತಂಡದ ಗೆಲುವನ್ನು ಸಂಭ್ರಮಿಸಲು ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ ಸಿಲುಕಿದ ಚಿನ್ಮಯಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವಳನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವಳು ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page