May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಂಗಳೂರು ನಗರಕ್ಕೆ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿದ್ದು, ಈ​ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಗೊಳಿಸಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದಾಗಿ ಕಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ ಸೀಮಂತ್​ ಕುಮಾರ್ ಸಿಂಗ್ IPS ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್ ಆಗಿ​ ನೇಮಕ ಮಾಡಿ ಆದೇಶ ಹೊರಡಿಸಿದೆ.

1996 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಬಿಹಾರ ಮೂಲದ ಸೀಮಂತ್ ಕುಮಾರ್ ಸಿಂಗ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆ.ಎಸ್.ಆರ್.ಪಿ. ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಇದೀಗ ಬೆಂಗಳೂರಿಗೆ 39ನೇ ನೂತನ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

ಸೀಮಂತ್‌ ಕುಮಾರ್‌ ಸಿಂಗ್‌ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ SP ಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್‌ ಕುಮಾರ್‌ ಸಿಂಗ್‌ ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆಯ ಕಮಾಂಡರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page