August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಡಿಪಾರು ನೋಟೀಸ್ – 8 ಮಂದಿ ವಕೀಲರ ಮೂಲಕ ಸಹಾಯಕ ಆಯುಕ್ತರ ಮುಂದೆ ಹಾಜರು

ಜೂನ್ 21 ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆ

ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಜೂನ್ 6ರಂದು ಶುಕ್ರವಾರ ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದ್ದು, ಗಡಿಪಾರು ನೊಟೀಸ್ ಪಡೆದ 8 ಮಂದಿ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ದಕ್ಷಿಣ ಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬಂಧಿಸಿದಂತೆ ಸುಮಾರು 36 ಮಂದಿ ಹಳೆ ಆರೋಪಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲು ಪಟ್ಟಿ ತಯಾರಿಸಲಾಗಿತ್ತು. ಅದರಲ್ಲಿ 8 ಮಂದಿಗೆ ಪೊಲೀಸ್ ಇಲಾಖೆ ನೋಟೀಸ್ ನೀಡಿತ್ತು. ಅದರಂತೆ ಇಂದು ಜೂನ್ 6ರಂದು ಶುಕ್ರವಾರ ನೋಟೀಸ್ ಜಾರಿಯಾದ 8 ಮಂದಿ ತಮ್ಮ ವಕೀಲರ ಜೊತೆ ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್‌ ಕುಮಾರ್ ವಿಚಾರಣೆ ತಮ್ಮ ವಕೀಲರ ಮೂಲಕ ಹಾಜರಾಗಿದ್ದಾರೆ. ಸದ್ಯ ಜೂನ್ 21 ಕ್ಕೆ ಮುಂದಿನ ವಿಚಾರಣೆ ಮುಂದೂಡಲಾಗಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page