September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

2ನೇ ತರಗತಿಯಿಂದಲೇ ಮಕ್ಕಳಿಗೆ ಟ್ರಾಫಿಕ್ ಪಾಠ – ರಾಜ್ಯ ಸರ್ಕಾರ

ರಸ್ತೆ ಸುರಕ್ಷತೆ ಮತ್ತು ಟ್ರಾಫಿಕ್ ಬಗ್ಗೆ ಶಾಲಾ ಪಠ್ಯಪುಸ್ತಕದಲ್ಲಿ ಪಾಠ ಅಳವಡಿಕೆ ಕುರಿತು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವ ಶಾಲೆಗಳಿಗೆ ಅನ್ವಯಿಸುವಂತೆ 2, 4, 6, 7 ಮತ್ತು 9ನೇ ತರಗತಿಯ ಮಕ್ಕಳಿಗೆ ಸಂಚಾರ ಸುರಕ್ಷತೆ ಕುರಿತು ಪಠ್ಯ ಅಳವಡಿಸಲಾಗುತ್ತಿದೆ.

ಟ್ರಾಫಿಕ್ ಪೊಲೀಸರಿಂದ ಸಿದ್ಧಪಡಿಸಿರುವ ಪಠ್ಯ ಕ್ರಮ

2025-26ನೇ ಸಾಲಿನ ಪಠ್ಯ ಕ್ರಮದಲ್ಲಿ ಟ್ರಾಫಿಕ್ ಲೈಟ್, ಸಂಚಾರ, ವೈಯುಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ಸಡಕ್ ಕೀ ರಕ್ಷಾ ಸಬ್ ಕೀ ಸುರಾಕ್ಷ ಪಠ್ಯಗಳನ್ನು ಅಳವಡಿಸಲಾಗಿದೆ. ಪಠ್ಯಪುಸ್ತಕ ರಚನೆ ಅಥವಾ ಪರಿಕ್ಷರಣೆ ಸಮಯದಲ್ಲಿ ಸಮಿತಿ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page