August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಸೈಗೋಳಿಯಲ್ಲಿರುವ ಕ್ಸೇವಿಯರ್ ITI ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಶಿಬಿರ

ಆಲ್ವಿನ್ ಡಿಸೋಜ ಪಾನೀರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ

ಅಸೈಗೋಳಿಯಲ್ಲಿರುವ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಂದು ಜೂನ್ 9ರಂದು ಸೋಮವಾರ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಕ್ಸೇವಿಯರ್ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಇವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿತ್ತು. ಮಕ್ಕಳು ಮುಂದಿನ ಭವಿಷ್ಯದಲ್ಲಿ ಸಮಾಜದಲ್ಲಿ ಜೀವಿಸುವಾಗ ಜೀವನವನ್ನು ಹೇಗೆ ರೂಪಿಸಬೇಕು? ಹೆತ್ತವರಿಗೆ ಹಾಗೂ ಸಮಾಜಕ್ಕೆ ಹೇಗೆ ಮಾದರಿಯಾಗಿ ಬಾಳಬೇಕು ಮತ್ತು ವಿದ್ಯಾಭ್ಯಾಸದ ನಂತರ ಉದ್ಯೋಗವನ್ನು ಪಡೆಯುವುದರ ಬಗ್ಗೆ ಸಂಕ್ಷೀಪ್ತವಾಗಿ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಂಡಿಯನ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಮುರಳಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಮಾತನಾಡಿ, “ವಿದ್ಯಾಭ್ಯಾಸವನ್ನು ಪಡೆದ ನಂತರ ವಿದ್ಯಾರ್ಥಿಗಳು ಸಮಾಜದಲ್ಲಿ ಹೇಗೆ ವಿಧೇಯರಾಗಿ ನಡೆಯಬೇಕು? ಕಲಿತ ಶಾಲೆಯನ್ನು ಯಾವುದೇ ಹುದ್ದೆಯಲ್ಲಿದ್ದರೂ ಹೆತ್ತ ತಾಯಿಯನ್ನು ಮರೆಯದ ಹಾಗೆ ಮರೆಯಬಾರದು ಎಂದು ಹಿತ ನುಡಿಗಳನ್ನು ಹೇಳಿದರು.

ವೇದಿಕೆಯಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಮ್ಯಾಕ್ಸಿಂ ಫೆರ್ನಾಂಡಿಸ್, ಸಂತೋಷ್ ಡಿಸೋಜ, ಎಲಿಯಾಸ್ ಡಿಸೋಜ, ಜೋನ್ ಡಿಸೋಜ ಸಂಸ್ಥೆಯ ಪ್ರಾಂಶುಪಾಲ ಸುಧೀರ್ ರಾಜ್ ಕೋಟ್ಯಾನ್ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಸುಧೀರ್ ರಾಜ್ ಕೋಟ್ಯಾನ್ ಸ್ವಾಗತಿಸಿ, ಶಿವಾನಂದ್ ಜೆ.ಟಿ.ಓ. ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page