July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಒಂದೇ ಭಾರತ ಒಂದೇ ತುರ್ತು ಕರೆ  – 112

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು ಸಹಾಯವಾಣಿ

ತುರ್ತು ಸಂಧರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ತುರ್ತು ಸಂಧರ್ಭದಲ್ಲಿ ಅಗತ್ಯ ತುರ್ತು ಸ್ಪಂದನೆ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಅದುವೇ ”ತುರ್ತು ಸ್ಪಂದನ ವ್ಯವಸ್ಥೆ-112”. ನಗರದ ಜನರು ತುರ್ತು ಸಂಧರ್ಭಗಳಲ್ಲಿ ಪೊಲೀಸ್, ಅಗ್ನಿ ಶಾಮಕ, ವಿಪತ್ತು ಬೇರೆ ಬೇರೆ ಸಹಾಯವಾಣಿಗೆ ಕರೆಮಾಡುವ ಅಗತ್ಯವಿಲ್ಲ. ಕೇವಲ 112 ಸಂಖ್ಯೆಗೆ ಕರೆ ಮಾಡಿದರೆ ಸಾಕು, ಈ ಎಲ್ಲಾ ಸಮಸ್ಯೆಗಳಿಗೂ ತುರ್ತು ಸೇವೆ ಸಾರ್ವಜನಿಕರಿಗೆ ಲಭಿಸಲಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಪಘಾತ, ಕೊಲೆ, ದರೋಡೆ, ಕಳ್ಳತನ, ಸುಲಿಗೆ, ಸರಗಳ್ಳತನ, ಜಗಳ, ಮಹಿಳಾ, ಮಕ್ಕಳ, ಹಿರಿಯ ನಾಗರಿಕರ, ಸಂಶಯವಿರುವ ವಾಹನ ಅಥವಾ ವ್ಯಕ್ತಿಗಳು ಇದ್ದಲ್ಲಿ ಹಾಗೂ ಇನ್ನಿತರ ಎಲ್ಲಾ ರೀತಿಯ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ, ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುವ ಮೊದಲು 112 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಈ ವ್ಯವಸ್ಥೆಯಲ್ಲಿ ನಿಮ್ಮ ಕರೆಯನ್ನು ಮೊದಲ ಆದ್ಯತೆ ಪರಿಗಣಿಸಿ ಹತ್ತಿರವಿರುವ ಪೊಲೀಸ್ ವಾಹನವನ್ನು ನೀವು ಇರುವ ಸ್ಥಳಕ್ಕೆ ಕಳುಹಿಸಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುವುದಾಗಿದೆ.

ಪೊಲೀಸ್ ನೆರವು / ಅಗ್ನಿ ಶಾಮಕ ದಳದ ನೆರವು / ವಿಪತ್ತು ನೆರವು ಸೇರಿದಂತೆ ಯಾವುದೇ ತುರ್ತು ಸಂಧರ್ಭದಲ್ಲಿ ನೂತನವಾದ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಎಮೆರ್ಜೆನ್ಸಿ ರೆಸ್ಪಾಂನ್ಸ್ ಸಪೋರ್ಟ್ ಸಿಸ್ಟಮ್ (ERSS) ವ್ಯವಸ್ಥೆಯಡಿ ನಗರದ ಎಲ್ಲಿಂದಲೇ ಕರೆ ಬಂದರು ತುರ್ತಾಗಿ ಅಲ್ಲಿಗೆ ತಲುಪಿ ರಕ್ಷಣೆ ಒದಗಿಸಲಾಗುತ್ತದೆ. ಸಾರ್ವಜನಿಕ ತುರ್ತು ಸ್ಪಂದನಾ ಸಹಾಯ ವ್ಯವಸ್ಥೆಗಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 28 ಪೆಟ್ರೋಲಿಂಗ್ ವಾಹನಗಳನ್ನು ಈ ಕರ್ತವ್ಯಕ್ಕೆ ಬಳಸಲಾಗುತ್ತಿದ್ದು, ದಿನದ 24X7 ಕಾರ್ಯ ನಿರ್ವಹಿಸುತ್ತಿದೆ . ಇದರಲ್ಲಿ 21 ಹೊಯ್ಸಳ ಮತ್ತು 07 ಹೈವೇ ಪೆಟ್ರೋಲ್ ವಾಹನಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಸದರಿ ವ್ಯವಸ್ಥೆಯನ್ನು ಸದುಪಯೋಗ ಪಡಿಸಿ ಕೊಳ್ಳಬಹುದಾಗಿದೆ ಎಂದು ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ IPS ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page