July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಂತರರಾಷ್ಟ್ರೀಯ ‘ಗ್ರೀನ್ ಆಸ್ಕರ್’ ಸೆಲ್ಕೋ ಮಡಿಲಿಗೆ

ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ


ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್‌ಗೆ ಆಶೆನ್ ಪ್ರಶಸ್ತಿ – 2025

ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 2025ನೇ ಸಾಲಿನ ಪ್ರತಿಷ್ಠಿತ ಆಸ್ಟೆನ್ ಪ್ರಶಸ್ತಿಯ ಗೌರವ ಸಂದಿದೆ. ಗ್ರೀನ್ ಆಸ್ಕರ್ ಎಂಬ ಹೆಗ್ಗಳಿಕೆ ಹೊಂದಿರುವ ಈ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಮೂರನೇ ಬಾರಿ ಮುಡಿಗೇರಿಸಿಕೊಂಡ ಗೌರವ ಸೆಸ್ಕೋ ಸಂಸ್ಥೆಗೆ ಸಲ್ಲುತ್ತಿದೆ. ಇದು 25ನೇ ಆಶೆನ್ ಪ್ರಶಸ್ತಿಯಾಗಿದ್ದು, ಜೂನ್ 11 ರಂದು ಲಂಡನ್‌ನ ರಾಯಲ್ ಜಿಯಾಗ್ರಫಿಕಲ್ ಸೊಸೈಟಿಯಲ್ಲಿ ನಡೆದ ಪ್ರತಿಷ್ಠಿತ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲಿಂಕ್ ಇನ್ ಎಂಟರ್‌ಪ್ರೆಸ್‌ ಅಕೌಂಟ್ ಡೈರೆಕ್ಟರ್ ಮತ್ತು ಗೋ ಗ್ರೀನ್ ಲೀಡ್‌ನ ಮುಖ್ಯಸ್ಥ ಕ್ರಿಸ್ ಬೆನೆಟ್ ಈ ಪ್ರಶಸ್ತಿಯನ್ನು ಸೆಲ್ಕ್ ಸಿಇಒ ಮೋಹನ ಹೆಗಡೆ ಮತ್ತು ಡಿಜಿಎಂ ಸುದೀಪ್ತ ಘೋಷ್ ಅವರಿಗೆ ಪ್ರದಾನ ಮಾಡಿದರು. ಗೋ ಗ್ರೀನ್ ಇಂಗ್ಲೆಂಡ್‌ನ ಹವಾಮಾನ ರಾಯಭಾರಿ ರಾಚೆಲ್ ಕೈಟ್ ಮತ್ತು ಉಗಾಂಡಾದ ಪರಿಸರವಾದಿ ವನೆಸ್ಸಾ ನಕೇಟ್, ಸೆಸ್ಕೋ ಸಂಸ್ಥೆಯ ಸಾಧನೆಯನ್ನು ಶ್ಲಾಘಿಸಿದರು. 2005 ಮತ್ತು 2007ರಲ್ಲಿಯೂ ಸೆಸ್ಕೋ ಸಂಸ್ಥೆಗೆ ಆಸ್ಟೆನ್ ಪ್ರಶಸ್ತಿ ಲಭಿಸಿದ್ದು, 25ನೇ ವರ್ಷದ ಗೌರವವನ್ನೂ ಮುಡಿಗೇರಿಸಿಕೊಂಡ ಸೆಲ್ಯೂ ಸಾಧನೆಯಿಂದಾಗಿ ಭಾರತದ ಪರಿಸರ ಕ್ಷೇತ್ರವೇ ಹೆಮ್ಮೆ ಪಡುವಂತಾಗಿದೆ.


ಸೆಲ್ಕೋ: ಸಾಧನೆಯ ಸುದೀರ್ಘ ಹಾದಿ –  1995ರಲ್ಲಿ ಡಾ. ಹರೀಶ್ ಹಂದೆ ಮತ್ತು ನೆವಿಲ್ಲೆ ವಿಲಿಯಮ್ಸ್ ಅವರು ಸ್ಥಾಪಿಸಿದ ಸೆಲ್ಯೂ ಸಂಸ್ಥೆ ಕರ್ನಾಟಕದ ಮನೆಗಳಿಗೆ ಸೌರಬೆಳಕು ಕೈಗೆಟುಕುವಂತೆ ಮಾಡುತ್ತ ಇಂದು, ದೇಶದ ಪ್ರಮುಖ ಸಾಮಾಜಿಕ ಉದ್ಯಮವಾಗಿ ಬೆಳೆದಿದೆ. ಆಂಧ್ರಪ್ರದೇಶ, ಬಿಹಾರ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಜನಸಾಮಾನ್ಯರಿಗೆ ಹಸಿರು ಇಂಧನವು ಲಭ್ಯವಾಗುವಂತೆ ಮಾಡುವಲ್ಲಿ ಅಹರ್ನಿಶಿ ಶ್ರಮಿಸುತ್ತಿದೆ. ಆಫ್ರಿಕಾ ಮತ್ತು ಆಗ್ನೆಯ ಏಷ್ಯಾದಲ್ಲಿಯೂ ಪಾಲುದಾರಿಕೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಈವರೆಗೆ ಸೆಲ್ಯೂ ಆರು ಲಕ್ಷಕ್ಕೂ ಹೆಚ್ಚು ಸೌರ ಉತ್ಪನ್ನಗಳನ್ನು ಮಾರಾಟ ಮಾಡಿದೆ. ಎಂಭತ್ತು ಲಕ್ಷಕ್ಕೂ ಹೆಚ್ಚು ಸೌರ ವಿದ್ಯುತ್ ಪರಿಣಾಮಗಳು(impact) ಜನರಿಗೆ ಲಭ್ಯವಾಗುವಂತೆ ಮಾಡಿದೆ. 24,000 ಕ್ಕೂ ಹೆಚ್ಚು ಸೌರ-ಜೀವನೋಪಾಯ ವ್ಯವಸ್ಥೆಗಳು ಗ್ರಾಮೀಣ ಜನರಿಗೆ ದೊರೆತಿದೆ. ಐದು ಲಕ್ಷಕ್ಕೂ ಹೆಚ್ಚು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸೌರಶಕ್ತಿ ಚಾಲಿತ ಡಿಜಿಟಲ್ ತರಗತಿ ಕೊಠಡಿಗಳನ್ನು ರೂಪಿಸಿದೆ. 60 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ಸೇವೆ ಸಲ್ಲಿಸುವ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಸೌರವಿದ್ಯುತ್ ಅಳವಡಿಸಲಾಗಿದೆ.


ಸೆಲ್ಕೋ ಸಿಇಒ ಮೋಹನ ಭಾಸ್ಕರ ಹೆಗಡೆ ನುಡಿಗಳು:-
“ಬಡತನದ ಸವಾಲು ಎದುರಿಸುವಲ್ಲಿ ಹಾಗೂ ಸಹಜ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ಪರ್ಯಾಯ ಇಂಧನ ಶಕ್ತಿ ಬಳಕೆ ಪ್ರಗತಿಪಥದಲ್ಲಿದೆ. ಇದರಿಂದ ಅಭಿವೃದ್ಧಿ ಹಾಗೂ ನಿಜವಾದ ಭರವಸೆ ಹೆಚ್ಚುತ್ತದೆ. ಪರಂಪರೆಯ ಸಹಜ ಹರಿವಿನಿಂದ ವ್ಯಕ್ತಿಯ ನೈಸರ್ಗಿಕ ಬುದ್ಧಿಮತ್ತೆ ಸಂರಕ್ಷಣೆ ಹಾಗೂ ಕೌಶಲ್ಯಾದಾರಿತ ಸಾಮಾಜಿಕ ಉದ್ಯಮ ಬೆಳವಣಿಗೆ ಸಾಧ್ಯ. ಮುಂದಿನ ಜನಾಂಗ ಇದನ್ನು ನೆನಪಿಸಿಕೊಳ್ಳುತ್ತದೆ. ಸುಸ್ಥಿರ ಸಮಾಜ ಇದರಿಂದ ನಿರ್ಮಾಣವಾಗುವುದು. ನಮ್ಮ ಸಂಸ್ಥೆಗೆ ಬಂದ ಈ ಪ್ರಶಸ್ತಿಯ ಗೌರವ ನಮ್ಮ ಆಡಳಿತ ಮಂಡಳಿ, ಡಿಜಿಎಂಗಳಾದ ಗುರುಪ್ರಕಾಶ್ ಶೆಟ್ಟಿ, ಪ್ರಸನ್ನ ಹೆಗಡೆ, ಸುದೀಪ್ ಘೋಷ್ ಹಾಗೂ ನಮ್ಮೆಲ್ಲಾ ಸಹೋದ್ಯೋಗಿಗಳ ಹಾಗೂ ನಮ್ಮೊಡನೆ ವ್ಯವಹರಿಸುವ ಎಲ್ಲಾ ಆರ್ಥಿಕ, ಸಾಮಾಜಿಕ ಹಾಗೂ ವ್ಯಾವಹಾರಿಕ ಬಂಧುಗಳಿಗೆ, ಮಾರ್ಗದರ್ಶನ ಮಾಡಿದ ಆಡಳಿತ ಮಂಡಳಿಗೆ ಸಲ್ಲುತ್ತದೆ” ಎಂದರು. ಸೌರ ವಿದ್ಯುತ್ ಬಳಕೆ, ಪ್ರಯೋಗ ಮತ್ತು ಪ್ರಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನೆರವು ಮತ್ತು ಬೆಂಬಲವನ್ನು ಈ ಸಂದರ್ಭದಲ್ಲಿ ಅವರು ಸ್ಮರಿಸಿಕೊಂಡಿದ್ದಾರೆ.

ಪ್ರಶಸ್ತಿಯ ಕುರಿತು ಮಾತನಾಡಿದ ಆಸ್ಟೆನ್ ಸಿಇಒ ಡಾ. ಅಶೋಕ್ ಸಿನ್ಹಾ, “2025 ರ ಆಸ್ಟೆನ್ ಪ್ರಶಸ್ತಿ ವಿಜೇತರು ನಮ್ಮನ್ನೆಲ್ಲ ಆಶಾದಾಯಕವಾದ ಉತ್ತಮ ಭವಿಷ್ಯದತ್ತ ಮುನ್ನಡೆಸುತ್ತಿದ್ದಾರೆ. ಸೆಲ್ಕೋ ಮೂಲಕ ರೂಪುಗೊಂಡ ಪರಿಹಾರೋಪಾಯಗಳು ಅಗಾಧವಾಗಿ ಪರಿಣಾಮ ಬೀರಬಲ್ಲವು ಎಂಬುದು ಸಾಬೀತಾಗಿದೆ” ಎಂದರು.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page