August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ದಿಢೀರ್ ವರ್ಗಾವಣೆ

ದಕ್ಷಿಣ ಕನ್ನಡಕ್ಕೆ ದರ್ಶನ್ ಎಚ್.ವಿ. ಹಾಗೂ ಉಡುಪಿಗೆ ಸ್ವರೂಪ ಟಿ.ಕೆ. ನೂತನ ಜಿಲ್ಲಾಧಿಕಾರಿಗಳಾಗಿ ನೇಮಕ

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್‌.ವಿ. ರವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್‌ ಜನರಲ್‌ ಆಫ್‌ ರಿಜಿಸ್ಟ್ರೇಷನ್‌ ಆಂಡ್‌ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರನ್ನು ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್.ಡಿ.ಪಿ.ಆರ್.) ನಿರ್ದೇಶಕರಾಗಿರುವ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page