August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಳೆಬಿಲ್ಲು ದಿನಾಚರಣೆ

ಬಜ್ಪೆಯಲ್ಲಿರುವ ಬೆಥನಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಜೂನ್ 18ರಂದು ಬುಧವಾರ ಕಿಂಡರ್ ಗಾರ್ಟನ್ ಮಕ್ಕಳು ಆಕಾಶದಲ್ಲಿ ಉಂಟಾಗುವ ಬಣ್ಣದ ಬೆಳಕಿನ  ಬಗ್ಗೆ  ಮಳೆಬಿಲ್ಲು ದಿನವನ್ನು ಆಚರಿಸುವುದರ ಮೂಲಕ ಸಂಭ್ರಮಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವಂದನೀಯ ವೀಣಾ ಡಿಸೋಜರವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ಮುದ್ದು ಪುಟಾಣಿ ಮಕ್ಕಳಿಗೆ ಕಾಮನಬಿಲ್ಲು ಬಣ್ಣಗಳ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳ ಸಂತೋಷದಲ್ಲಿ ಮುಖ್ಯ ಶಿಕ್ಷಕರು ಹಾಗೂ ಕಿಂಡರ್ ಗಾರ್ಟನ್ ನ ಎಲ್ಲಾ ಶಿಕ್ಷಕರು ಭಾಗಿಯಾದರು.

ವಿದ್ಯಾರ್ಥಿಗಳು ಅದ್ಭುತವಾದ ಮಳೆಬಿಲ್ಲಿನ ವಿಷಯದ ಕರಕುಶಲ ವಸ್ತುಗಳೊಂದಿಗೆ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಿದರು. ವರ್ಣರಂಜಿತ ಉಡುಪುಗಳನ್ನು ಧರಿಸಿ, ವಿವಿಧ ಬಣ್ಣಗಳಲ್ಲಿ ಹಣ್ಣುಗಳ ಶ್ರೇಣಿಯನ್ನು ವರ್ಣಿಸಿ ಕಾರ್ಯಕ್ರಮವನ್ನು ಚಂದಗಾಣಿಸಿದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page