July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಳೆ ಜೂನ್ 21ರಂದು ಪುತ್ತೂರಿನಲ್ಲಿ ವಿಶ್ವ ಯೋಗ ದಿನ ಆಚರಣೆ

ವಿಶ್ವ ಯೋಗ ದಿನದ ಸಂದರ್ಭದಲ್ಲಿ ಪುತ್ತೂರು ದೇವಾಲಯದ ಸಭಾಭವನ /ನಟರಾಜ ವೇದಿಕೆ, ಪುತ್ತೂರು ಇಲ್ಲಿ ನಾಳೆ ಜೂನ್ 21ರಂದು ಶನಿವಾರ ಬೆಳಿಗ್ಗೆ 5:30 ಗಂಟೆಯಿಂದ ಸಾಯಂಕಾಲ 7:00ರ ತನಕ ವಿಶ್ವ ಯೋಗ ದಿನಾಚರಣೆಯು ನಡೆಯಲಿದೆ.

 

ಯೋಗ ಕೇಂದ್ರ ಪುತ್ತೂರು, ಸುದ್ದಿ ಸಮೂಹ ಸಂಸ್ಥೆಗಳು, ಅರಣ್ಯ ಇಲಾಖೆ ಪುತ್ತೂರು, ಮಹಾಬಲ ಲಲಿತ ಕಲಾ ಸಭಾ (ರಿ.) ಮತ್ತು ಅನಿಕೇತನ ಎಜುಕೇಶನಲ್ ಟ್ರಸ್ಟ್ (ರಿ.) ಪುತ್ತೂರು ಇವರೆಲ್ಲರ ಸಹಕಾರದೊಂದಿಗೆ ನಡೆಯಲಿರುವ ಈ ಯೋಗ ದಿನಾಚರಣೆಯ ಅಧ್ಯಕ್ಷತೆಯನ್ನು ಈಶ್ವರ ಭಟ್ ಪಂಜಿಗುಡ್ಡೆ ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರು ವಹಿಸಲಿದ್ದಾರೆ. ವೇದಮೂರ್ತಿ ಶ್ರೀ ವಸಂತಕೃಷ್ಣ ಕೆದಿಲಾಯ, ಪ್ರಧಾನ ಅರ್ಚಕರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರು ಯೋಗ ದಿನಾಚರಣೆಯನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಿರಣ್ ಬಿ.ಎಂ. ಅರಣ್ಯಾಧಿಕಾರಿ ಪುತ್ತೂರು ಇವರು ಭಾಗವಹಿಸಲಿದ್ದಾರೆ.  ಈ ಸಂದರ್ಭದಲ್ಲಿ ದೇವಾಲಯದ ಪರಿಸರದಲ್ಲಿ ಮರ ಗಿಡಗಳ ನಿರ್ವಹಣೆ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿಶ್ವ ಯೋಗ ಆಚರಣೆ ಸಮಿತಿ ಪುತ್ತೂರು ಇವರು ತಿಳಿಸಿದ್ದಾರೆ.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page