August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆಯಲ್ಲಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ಲಬ್ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ

ಬಜ್ಪೆಯಲ್ಲಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ಲಬ್ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವನ್ನು ಆಚರಿಸಲಾಯಿತು.

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಸಮಾಜದಲ್ಲಿ ಅವರು ಉತ್ತಮ ನಾಯಕರಾಗುವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ವಿದ್ಯಾರ್ಥಿಗಳು ಸಾಮಾಜಿಕ ಬದ್ಧತೆಯ ಬದುಕಿಗೆ ಪೂರಕ ಮೌಲ್ಯಗಳನ್ನು ಅರಿಯುವತ್ತ ಗಮನ ಹರಿಸಬೇಕು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಹಲವಾರು ಮಗ್ಗುಲುಗಳಲ್ಲಿ ತಮ್ಮ ಮನಸ್ಸನ್ನು ಹರಿಯ ಬಿಟ್ಟು ಉತ್ತಮ ಮೌಲ್ಯಗಳನ್ನು ಸ್ವೀಕರಿಸಬೇಕು ವಿದ್ಯಾರ್ಥಿ ದೆಸೆಯಲ್ಲಿ ಸಮಾಜ ಪದ್ಧತಿಯ ಕಾರ್ಯಗತ ಗಮನ ಹರಿಸಿದಾಗ ಕಾಲಕ್ರಮೇಣ ಉತ್ತಮ ನಾಯಕತ್ವ ಹೊಂದಲು ಅವಕಾಶವಾಗುತ್ತದೆ ಎಂದು ಡೆಲ್ಸಿ ಸುಚಿತ್ರ ರೊಡ್ರಿಗಸ್ ರವರು ತಮ್ಮ ಅಧ್ಯಕ್ಷೀಯ ನುಡಿಗಳಿಂದ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾಗಿರುವ ವಂದನೀಯ ಭಗಿನಿ ವೀಣಾ ಡಿಸೋಜರವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿದರು. ವಿನುತಾ ರವರು ವಂದಿಸಿದರು ಪ್ರತಿಭಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page