August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿವೃತ್ತ ಬ್ಯಾಂಕ್ ಉದ್ಯೋಗಿ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣು

ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ.

ಮೃತರನ್ನು ಅಳಕೆ ನಿವಾಸಿ 61 ವರ್ಷ ಪ್ರಾಯದ ಗಿರಿದರ್ ಯಾದವ್ ಎಂದು ಗುರುತಿಸಲಾಗಿದೆ. ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ಗಿರಿದರ್ ಯಾದವ್, ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಯಿಂದ ಬ್ಯಾಂಕ್ ಗೆ ಹೋಗಿ ಬರುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ನಿನ್ನೆ ಬ್ಯಾಂಕ್ ಗೆ ತೆರಳಿದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ. ಈ ಹಿನ್ನಲೆ ಗಿರಿದರ್ ಅವರ ಪತ್ನಿ ಮಂಗಳೂರಿನ ಬಂದರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು ಎಂದು ಹೇಳಲಾಗಿದೆ.

ಇಂದು ಜೂನ್ 26ರಂದು ಗುರುವಾರ ಬೆಳಿಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ ನ ಸ್ಟೋರ್ ರೂಂ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗಿರಿಧರ್ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಗಿರಿಧರ್ ಯಾದವ್ ಅವರು ರಾಜ್ಯಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂದು ಹೇಳಲಾಗಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page