May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಸ್.ಕೆ.ಎಸ್.ಬಿ.ವಿ. ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ

ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ. ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ ಮಸೀದಿ ಉಸ್ತುವಾರಿ ಸಮಿತಿ ಅಧ್ಯಕ್ಷ ಹಂಝ ಹಾಜಿ ಧ್ವಜಾರೋಹಣ ನೆರವೇರಿಸಿದರು.

ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮದ್ರಸ ಮೆನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ ಶುಭ ಹಾರೈಸಿದರು. ಮಸೀದಿ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಅವರು “ಸಮಸ್ತ ನಡೆದು ಬಂದ ದಾರಿ”ಯ ಬಗ್ಗೆ ವಿವರಿಸಿದರು. ಮದ್ರಸ ಉಸ್ತುವಾರಿ ಲತೀಫ್ ನೇರಳಕಟ್ಟೆ ಅತಿಥಿಗಳಾಗಿ ಭಾಗವಹಿಸಿದ್ದರು.

ಪಂತಡ್ಕ ಮಸೀದಿ ಉಸ್ತುವಾರಿ ಸಮಿತಿ ಉಪಾಧ್ಯಕ್ಷ ಇಬ್ರಾಹಿಂ ಹಾಜಿ ನೆಡ್ಯಾಲು, ಪ್ರಧಾನ ಕಾರ್ಯದರ್ಶಿ ಬದ್ರುದ್ದೀನ್ ಮಾಣಿ, ಕಾರ್ಯದರ್ಶಿ ಇಂಜಿನಿಯರ್ ಲತೀಫ್ ಕೊಡಾಜೆ, ಎಸ್.ಕೆ.ಎಸ್.ಬಿ.ವಿ. ಅದ್ಯಕ್ಷ ಮುಹಮ್ಮದ್ ಫಾರಿಸ್, ಉಪಾಧ್ಯಕ್ಷ ಮುಹಮ್ಮದ್ ಸಹಲ್, ಕಾರ್ಯದರ್ಶಿ ಫಲುಲುರ್ರಹ್ಮಾನ್, ಕೋಶಾಧಿಕಾರಿ ಶೇಖ್ ಇಮ್ರಾನ್, ಪ್ರಮುಖರಾದ ಖಾದರ್ ಪಂತಡ್ಕ, ಮುಹಮ್ಮದ್ ಕಡಬ, ಹನೀಫ್ ಪಂತಡ್ಕ, ಹನೀಫ್ ಪರ್ಲೊಟ್ಟು, ಹನೀಫ್ ಗುಲ್ಜಾರ್, ಅಶ್ರಫ್ ಗುಲ್ಜಾರ್, ರಶೀದ್ ಫ್ಯಾನ್ಸಿ, ಆಸಿಫ್ ಪಂತಡ್ಕ, ರಫೀಕ್, ಝಾಕಿರ್, ಮುಸ್ತಫಾ ಪಂತಡ್ಕ ಮೊದಲಾದವರು ಉಪಸ್ಥಿತರಿದ್ದರು. ಮದ್ರಸ ಮುಖ್ಯ ಶಿಕ್ಷಕ ಜಾಫರ್ ಸ್ವಾದಿಕ್ ಅರ್ಶದಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page