August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕ್ರಿಕೆಟ್ ವಿಚಾರದಲ್ಲಿ ವಾಟ್ಸಪ್‌ನಲ್ಲಿ ಅವಾಚ್ಯ ಶಬ್ದ ಪ್ರಯೋಗ ಯುವಕನಿಗೆ ಹಲ್ಲೆ ಪ್ರಕರಣ-ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಸುಳ್ಯದ ಮರ್ಕಂಜದಲ್ಲಿ ಕ್ರಿಕೆಟ್ ವಿಚಾರವಾಗಿ ವಾಟ್ಸಪ್‌ನಲ್ಲಿ ಅವಾಚ್ಯ ಶಬ್ದ ಪ್ರಯೋಗವಾಗಿ ವಿಚಾರಿಸಲು ಮನೆಗೆ ಹೋಗಿ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೂ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮರ್ಕಂಜದ ಅಂಗಡಿಮಜಲು ಎಂಬಲ್ಲಿ ಘಟನೆ ನಡೆದಿತ್ತು. ಸ್ಥಳೀಯವಾಗಿ ಗಾರೆ ಕೆಲಸ ಮಾಡಿಕೊಂಡಿದ್ದ ನಯನಕುಮಾರ್ ರೈ ಎಂಬವರ ಮೇಲೆ ಪ್ರಶಾಂತ್ ಆರ್ನಡ್ಕ, ಪ್ರಮೋದ್ ಬೊಳ್ಳಾಜೆ, ಚೇತನ್ ಜೋಗಿಮೂಲೆ, ಪ್ರಜ್ಞೇಶ್ ದೇಶಕೋಡಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ನಯನ ಕುಮಾರ್ ರೈಯವರ ಅಣ್ಣ ಸುಂದರರವರು ದೂರು ನೀಡಿದ್ದರು.`ತಾನು ಮತ್ತು ಮನೆಯವರು ಜೂನ್ 9ರಂದು ರಾತ್ರಿ 10 ಗಂಟೆ ಸುಮಾರಿಗೆ ಊಟ ಮಾಡಿ ಎದುರಿನ ಸಿಟೌಟ್‌ನಲ್ಲಿ ಕುಳಿತು ಮಾತನಾಡುತ್ತಿದ್ದಾಗ ಆರೋಪಿಗಳು ಮನೆಯ ಬಳಿಗೆ ಬಂದು ನಯನಕುಮಾರ್ ರೈ ಎಲ್ಲಿ ಎಂದು ಕೇಳಿದಾಗ, ಏನು ವಿಷಯ, ಇಷ್ಟು ಹೊತ್ತಿನಲ್ಲಿ ಯಾಕೆ ಬಂದಿರಿ ಎಂದು ನಾನು ಕೇಳಿದರೂ ಏನೂ ಉತ್ತರಿಸದೆ ನಯನಕುಮಾರ್ ರೈ ಎಲ್ಲಿ ಎಂದು ಕೇಳುತ್ತಿದ್ದರು.

ಅಷ್ಟರಲ್ಲಿ ತಮ್ಮ ನಯನ ಕುಮಾರ್ ರೈ ಒಳಗಿನಿಂದ ಹೊರಗೆ ಬಂದಾಗ ನಾಲ್ಕು ಜನ ಆರೋಪಿಗಳೂ ನಮ್ಮ ಮನೆಯ ಗೇಟಿನ ಬದಿಯಲ್ಲಿದ್ದ ಬೇಲಿಯಿಂದ ದೊಣ್ಣೆಗಳನ್ನು ಮುರಿದುಕೊಂಡು ಬಂದು ಏನೂ ಮಾತನಾಡದೆ ಏಕಾಏಕಿ ತಮ್ಮನ ಮುಖಕ್ಕೆ, ತಲೆಗೆ ಹೊಡೆದರು. ಈ ವೇಳೆ ತಮ್ಮ ಕೆಳಗೆ ಬಿದ್ದಿದ್ದು ಆರೋಪಿಗಳು ಆತನ ಎದೆ, ಹೊಟ್ಟೆಯನ್ನು ಕಾಲಿನಿಂದ ತುಳಿದು, ಈದಿನ ಈತನನ್ನು ಕೊಂದು ಬಿಡೋಣ ಎನ್ನುತ್ತಾ ಮನಬಂದಂತೆ ಕಾಲಿನಿಂದ ತುಳಿದರು. ತಮ್ಮನ ಮೇಲೆ ಆರೋಪಿಗಳು ಮಾರಕಾಯುಧ ದೊಣ್ಣೆಯಿಂದ ಹಲ್ಲೆ ಮಾಡಿದ್ದರಿಂದ ತಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದ. ತಮ್ಮನನ್ನು ಕೊಲೆ ಮಾಡುವ ಉದ್ದೇಶದಿಂದ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿ ನಯನ ಕುಮಾರ್ ರೈ ಅವರ ಅಣ್ಣ ಸುಂದರ ಅವರು ನೀಡಿದ್ದ ದೂರಿನ ಮೇರೆಗೆ ಸುಳ್ಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ಪುತ್ತೂರಿನ ಕಜೆ ಲಾ ಚೇಂಬರ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಮತ್ತು ಮಹೇಶ್ ಜೋಗಿ ಮಂಗಳೂರು ವಾದಿಸಿದ್ದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page