August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಲೆ ಮೆರೆಸಿಕೊಂಡ ದನ ಕಳ್ಳನಿಂದ ಮಾದಕ ವಸ್ತು ಮಾರಾಟ – ಸಿಸಿಬಿ ಪೊಲೀಸರ ಬಲೆಗೆ

ಬೆಂಗಳೂರು/ಮುಂಬೈಯಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ತರಿಸಿಕೊಂಡು ಮುಡಿಪು ಕಂಬಳ ಪದವು ರಸ್ತೆಯಲ್ಲಿ ಕಾರಿನಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳ ಅಬ್ದುಲ್ ಕಬೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 15ಕ್ಕಿಂತ ಹೆಚ್ಚು ದನ ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು, ನ್ಯಾಯಾಲಯಕ್ಕೆ ಹಾಜರಾಗದೆ, ಕಳೆದ ಎರಡು ವರ್ಷಗಳಿಂದ ತಲೆಮೆರೆಸಿಕೊಂಡು ಓಡಾಡುತ್ತಿರುವ ಅಬ್ದುಲ್ ಕಬೀರ್ ನನ್ನು ರೆಡ್ ಹ್ಯಾಂಡ್ ಆಗಿ ಪೊಲೀಸರು ಹಿಡಿದಿದ್ದಾರೆ.

ಆತನ ವಶದಿಂದ ರೂಪಾಯಿ 1,20,000/- ಮೌಲ್ಯದ 12.05 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, KA-25-MA-8950ನೇ ನಂಬ್ರದ ಬಿಳಿ ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು ರೂಪಾಯಿ 4,31,250/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿ ಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಿಳಿ ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಜೂನ್ 3ರಂದು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಿದ್ದಾರೆ.

ಆರೋಪಿ 36 ವರ್ಷದ ಅಬ್ದುಲ್ ಕಬೀರ್ @ ಪಾರಿವಾಳ ಕಬೀರ್ ಎಂಬಾತನ ವಿರುದ್ದ ಮಂಗಳೂರು ನಗರದ ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪೂರ್ವ, ಕಂಕನಾಡಿ ನಗರ, ಉಳ್ಳಾಲ, ಬಜ್ಪೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ, ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ 15 ಕ್ಕಿಂತ ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ. ಆರೋಪಿಯು ಪೊಲೀಸ್ ಕ್ವಾರ್ಟರ್ಸ್ ರಸ್ತೆ ಅಸೈಗೋಳಿ ಕೋಣಾಜೆಯಲ್ಲಿ ವಾಸವಾಗಿದ್ದನು. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page