August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮದುವೆಯಾಗಲು ನಿರಾಕರಿಸಿ ವಂಚನೆ – ಆರೋಪಿ ಕೃಷ್ಣ ಜೆ. ರಾವ್ ಬಂಧನ

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿ 21 ವರ್ಷ ಪ್ರಾಯದ ಕೃಷ್ಣ ಜೆ. ರಾವ್ ಇವನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ದ ಪ್ರಕರಣ ದಾಖಲಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ.

ಈ ಬಗ್ಗೆ ಜೂನ್ 24ರಂದು ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್‌. 2023 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ಜುಲಾಯಿ 04ರಂದು ಶುಕ್ರವಾರ ರಾತ್ರಿ ಮೈಸೂರಿನ ಟಿ. ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿರುತ್ತಾರೆ.

ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ. ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆರೋಪಿತನ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page