May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಮಹಾಸಭೆ

ಹೆತ್ತವರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಬೇಕು – ಐರಿನ್ ರೆಬೆಲ್ಲೊ

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಮಹಾಸಭೆಯು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಐರಿನ್ ರೆಬೆಲ್ಲೊರವರು ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರ ಎಂಬ ವಿಷಯದ ಬಗ್ಗೆ ಮಾತನಾಡುತ್ತಾ “ಮಕ್ಕಳು ಇಚ್ಛಾಶಕ್ತಿ, ಭದ್ಧತೆ, ಛಲವನ್ನು ಬೆಳೆಸಿಕೊಳ್ಳಬೇಕು. ಹೆತ್ತವರು ಮಗುವಿನಲ್ಲಿ ಹುದುಗಿರುವ ಪ್ರತಿಭೆ ಸಾಮರ್ಥ್ಯಗಳನ್ನು ಬೆಳೆಸಬೇಕೆ ಹೊರತು ಅವರ ಮೇಲೆ ಒತ್ತಡ ಹೇರಬಾರದು. ಸಕರಾತ್ಮಕ ಮಾತುಗಳನ್ನು ಆಡುವಂತೆ ಮಕ್ಕಳಲ್ಲಿ ಜಾಗೃತಿಯನ್ನು ತರಬೇಕು ಅಧ್ಯಯನ ಮತ್ತು ಸಹಕಾರ ಮನೋಭಾವವನ್ನು ಮಕ್ಕಳಲ್ಲಿ ಮೂಡಿಸಿ ಹೃದಯವಂತರನ್ನಾಗಿಸಬೇಕೆಂದು” ಪೋಷಕರಿಗೆ ಮನವರಿಕೆ ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಶಾಲಾ ಸಂಚಾಲಕರಾಗಿರುವ ವಂದನೀಯ ಭಗಿನಿ ಫ್ಲಾವ್ಯ ವಿಲ್ಮರವರು ಬದುಕಿನ ತತ್ವ ನಿಷ್ಠೆಗಳನ್ನು ಮೈಗೂಡಿಸಿಕೊಂಡು ಗೆಲುವಿನ ಹಾದಿಯಲ್ಲಿ ಸಾಗುವ ಛಲ ವಿದ್ಯಾರ್ಥಿಗಳಿಗಿದ್ದರೆ ಯಶಸ್ಸನ್ನು ಸಾಧಿಸಬಹುದು ಎಂದು ತಮ್ಮ ಅಧ್ಯಕ್ಷೀಯ ನುಡಿಗಳಿಂದ ವಿದ್ಯಾರ್ಥಿಗಳ ಪೋಷಕರಿಗೆ ತಿಳಿಸಿದರು.

ಶಾಲಾ ಮುಖ್ಯ ಶಿಕ್ಷಕರಾಗಿರುವ ವಂದನೀಯ ಭಗಿನಿ ವೀಣಾ ಡಿಸೋಜರವರು ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ ಹೂವನ್ನು ನೀಡುವುದರ ಮೂಲಕ ಅಭಿನಂದಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕಿ ಭಗಿನಿ ಫ್ಲಾವ್ಯ ವಿಲ್ಮಾರವರು ಸ್ಥಳೀಯ ಕಾನ್ವೆಂಟಿನ ಮೇಲ್ವಿಚಾರಕಿ ವಂದನೀಯ ಭಗಿನಿ ಲಿಲ್ಲಿ ಡಿಸೋಜ ಹಾಗೂ ಶಾಲಾ ಮುಖ್ಯ ಶಿಕ್ಷಕರು, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಹಾಗೂ ನೂತನವಾಗಿ ಆಯ್ಕೆಯಾಗಿರುವ ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿರುವ ವಿದ್ಯಾ ಶೆಟ್ಟಿಯವರು ಉಪಸ್ಥಿತಿಯಲ್ಲಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲರನ್ನು ಚೈತ್ರಾ ಸ್ವಾಗತಿಸಿದರು. ರೋಹಿಣಿ ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯ ಶಿಕ್ಷಕರು ವರದಿ ವಾಚಿಸಿ, ಸವಿತಾ ವಂದಿಸಿದರು.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page