August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉದ್ಘಾಟನೆಗೆ ಸಿದ್ಧಗೊಂಡಿರುವ ಪುತ್ತೂರಿನ ಹೊಸ ನ್ಯಾಯಾಲಯ ಸಂಕೀರ್ಣ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ನ್ಯಾಯಾಲಯ ಕಟ್ಟಡ ಸಿದ್ಧಗೊಂಡು ಉದ್ಘಾಟನೆಗಾಗಿ ಕಾಯುತ್ತಿದೆ. ಸದ್ಯ ಹಳೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಲಯವು ಉದ್ಘಾಟನೆ ಬಳಿಕ ಬನ್ನೂರಿನ ಹೊಸ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರಗೊಳ್ಳಲಿದೆ.

2022ರಲ್ಲಿ ಈ ಹೊಸ ನ್ಯಾಯಾಲಯ ಕಟ್ಟಡದ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಇದೀಗ ಕಟ್ಟಡದ ಬಹುತೇಕ ಕಾಮಗಾರಿಗಳು ಮುಕ್ತಾಯವಾಗಿದೆ. ಅಂದಿನ ಶಾಸಕರಾಗಿದ್ದ ಸಂಜೀವ ಮಠಂದೂರು ಮೂಲಕ ಮಂಜೂರಾದ ಸುಮಾರು 50ಕೋಟಿ ರೂಪಾಯಿ ವೆಚ್ಚದ ನ್ಯಾಯಾಲಯ ಸಂಕೀರ್ಣ ಮತ್ತು 5 ಕೋಟಿ ರೂಪಾಯಿ ವೆಚ್ಚದ ವಕೀಲರ ಸಂಘದ ಕಟ್ಟಡ ಇಲ್ಲಿ ನಿರ್ಮಾಣಗೊಂಡಿದೆ.

ಮೊದಲ ಹಂತದಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ವಕೀಲರ ಸಂಘದ ಕಟ್ಟಡವನ್ನು ನಿರ್ಮಿಸುವ ಯೋಜನೆಯಿತ್ತು. ಆ ಬಳಿಕ ಅಂದಿನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಇದೇ ನ್ಯಾಯಾಲಯ ಸಂಕೀರ್ಣ ಜಿಲ್ಲಾ ನ್ಯಾಯಾಲಯದ ಸ್ಥಾಪನೆಗೂ ಅವಕಾಶವಿರಬೇಕು ಎನ್ನುವ ಕಾರಣಕ್ಕೆ ಇದೇ ಕಟ್ಟಡಕ್ಕೆ ಹೆಚ್ಚುವರಿ 25 ಕೋಟಿ ರೂಪಾಯಿ ವಿನಿಯೋಗಿಸಿ ಒಟ್ಟು 55 ಕೋಟಿ ರೂಪಾಯಿ ವ್ಯಯಿಸಿ ಈ ಕಟ್ಟಡದ ನಿರ್ಮಾಣವಾಗಿದೆ. ನ್ಯಾಯಾಲಯಕ್ಕೆ ಸಂಪರ್ಕ ಕಲ್ಪಿಸುವ ಹೊಸ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page