ಕರ್ನಾಟಕದಲ್ಲಿನ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ – ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಬಲ ನೀಡಲು LKG ಯಿಂದ PUC ತನಕ ಕರ್ನಾಟಕ ಸರಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಹಾಜರಾತಿ ಹಾಗೂ ಗುಣಮಟ್ಟ ಹೆಚ್ಚಿಸಲು, ಉಚಿತ ಬಸ್ ವ್ಯವಸ್ಥೆಯನ್ನು ನೀಡಲು ಕರ್ನಾಟಕ ರಾಜ್ಯ ಸರಕಾರವು ಉದ್ದೇಶಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.


ಎಲ್ಲಾ ವಿದ್ಯಾರ್ಥಿಗಳು ಈ ಉಚಿತ ಬಸ್ ಪ್ರಯಾಣದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಕರ್ನಾಟಕ ರಾಜ್ಯ ಸರಕಾರದ ದಿಟ್ಟ ಹೆಜ್ಜೆಯೂ ಇದಾಗಿದೆ ಎಂದು ಅವರು ತಮ್ಮ ಎಕ್ಸ್ ಪೋಸ್ಟಿನಲ್ಲಿ ಹಂಚಿಕೊಂಡಿದ್ದಾರೆ. ಸರಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಹಾಗೂ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ನೇತೃತ್ವದ ರಾಜ್ಯ ಸರ್ಕಾರದ ಈ ಮಹತ್ವದ ಘೋಷಣೆಯನ್ನು ವಿದ್ಯಾರ್ಥಿಗಳು ಹಾಗೂ ಹೆತ್ತವರು ಸಂತೋಷದಿಂದ ಸ್ವೀಕರಿಸಿದ್ದಾರೆ.




