May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡ್ರಗ್ ಪೆಡ್ಲರ್ ಬೀದರ್ ಮೂಲದ ಖ್ಯಾತ ವೈದ್ಯನ ಬಂಧನ

ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಡ್ರಗ್ ಪೆಡ್ಲರ್ ಆಗಿದ್ದ ವೈದ್ಯನನ್ನು ಬಂಧಿಸಿದ್ದಾರೆ. ಬೀದರ್ ಮೂಲದ ವೈದ್ಯ ಪ್ರಜ್ವಲ್ ಪಿಣ್ಯಾಸ್ ಬಂಧಿತ ಆರೋಪಿ. ಡ್ರಗ್ ಜಾಲವೊಂದು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಡ್ರಗ್ಸ್ ಪೂರೈಸುತ್ತಿತ್ತು. ವೈದ್ಯನ ಬಂಧನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲದ ಬಗ್ಗೆ ಹಲವು ಸ್ಫೋಟಕ ಮಾಹಿತಿಗಳು ಲಭ್ಯವಾಗಿವೆ.

ಬೀದರ್ ಮೂಲದ ವೈದ್ಯ ಪ್ರಜ್ವಲ್, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿದ್ದು, ಪ್ರಜ್ವಲ್ ಹಾಗೂ ಇತರ ಪೆಡ್ಲರ್ ಗಳು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಡ್ರಗ್ಸ್ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆ ನಡೆಸಿದಾಗ ವೈದ್ಯ ಪ್ರಜ್ವಲ್ ಪಿಣ್ಯಾಸ್ ಹೆಸರು ಬಾಯ್ಬಿಟ್ಟಿದ್ದಾರೆ. ಆತನೇ ಕಿಂಗ್ ಪಿನ್ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ವೈದ್ಯ ಪ್ರಜ್ವಲ್ ಪಿಣ್ಯಾಸ್ ಈ ಹಿಂದೆ ಮಂಗಳೂರಿನ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಮಂಗಳೂರಿನ ಮೂರು ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ಜಾಡು ಹಿಡಿದಾಗ ವೈದ್ಯ ಪ್ರಜ್ವಲ್ ಕರ್ಮಕಾಂಡ ಬಯಲಾಗಿದೆ. ಒಟ್ಟು 9 ಆರೋಪಿಗಳನ್ನು ಬಂಧಿಸಲಾಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page