August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ  ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮಾಣಿ ವಲಯದ ಶೌರ್ಯ ತಂಡದ ಸದಸ್ಯರು ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣು ಹಂಪಲುಗಳ ಗಿಡಗಳನ್ನು ನೆಡುವುದರೊಂದಿಗೆ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಮಾತನಾಡಿ ಹಸಿರು ನಮ್ಮೆಲ್ಲರ ಉಸಿರು ಮುಂದಿನ ಪೀಳಿಗೆಗೆ ಮರ-ಗಿಡಗಳನ್ನು ಬೆಳೆಸಿ ಪೋಷಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವೆಂದು ಹೇಳಿದರು. ಈ ಸಂದರ್ಭದಲ್ಲಿ ಪರಿಸರ ಬಗ್ಗೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ  ವಿಜೇತರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮಾಣಿ ವಲಯದ ಶೌರ್ಯ ತಂಡದ ಸಂಯೋಜಕ ಸತೀಶ್, ಶಾಲಾ ಎಸ್.ಡಿ.ಎಮ್.ಸಿ. ಉಪಾಧ್ಯಕ್ಷ ಹರೀಶ್ ಕುಲಾಲ್, ಶೌರ್ಯ ತಂಡದ ಸದಸ್ಯರುಗಳು, ಒಕ್ಕೂಟ ಸೇವಾ ಪ್ರತಿನಿಧಿ ಪುಷ್ಪ, ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿ, ಶಿಕ್ಷಕಿ ದೀಕ್ಷಾ ವಂದಿಸಿ, ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಐಸಮ್ಮರವರು ಸಹಕರಿಸಿದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page