August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅರಣ್ಯ ಗಸ್ತುಪಾಲಕ ಜಿತೇಶ್ ಪಿ. ರವರಿಗೆ ಮುಖ್ಯಮಂತ್ರಿ ಪದಕ

ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್ ಪಿ.ರವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಇವರು ಸುಮಾರು 20 ವರ್ಷಗಳಿಂದ ಪಂಜ, ಮಂಗಳೂರು, ಬಂಟ್ವಾಳ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬಂಟ್ವಾಳ ವಲಯದಲ್ಲಿ ಗಸ್ತು ಪಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮಂಗಳೂರು ವಿಭಾಗದ ಗಸ್ತು ಪಾಲಕ ಹಾಗೂ ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇವರ ಅರಣ್ಯ ಇಲಾಖೆಯಲ್ಲಿನ ದಕ್ಷ, ನಿಷ್ಠೆ ಹಾಗೂ ಪ್ರಾಮಾಣಿಕತೆಯ ಕೆಲಸವನ್ನು ಪರಿಗಣಿಸಿ ಅಕ್ರಮವಾಗಿ ಮರ ಕಡಿಯುವುದು ಮತ್ತು ಕಳ್ಳ ಸಾಗಾಣಿಕೆ ತಡೆಗಟ್ಟುವ ಸಾಧನೆಯ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುತ್ತಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page