July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿಯಲ್ಲಿ ಮಹಿಳಾ ನಾಯಕತ್ವ ಜಾಗೃತಿ, ಸ್ವ ಉದ್ಯೋಗ ತರಬೇತಿ ಮತ್ತು ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮ ಪಂಚಾಯತ್ ಇದರ ಸಹಾಭಾಗೀತ್ವದೊಂದಿಗೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ (ರಿ.) ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡ ಮಾಣಿ ಶಾಖೆ ಇದರ ಆಶ್ರಯದಲ್ಲಿ ಮಹಿಳಾ ನಾಯಕತ್ವ ಜಾಗೃತಿ, ಸ್ವ ಉದ್ಯೋಗ ತರಬೇತಿ ಮತ್ತು ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ ಕಾರ್ಯಾಗಾರವು ಜುಲಾಯ್ 15ರಂದು ಮಂಗಳವಾರ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಮಹಿಳೆಯರು ಸ್ವ ಉದ್ಯೋಗ ಮಾಡುವ ಮೂಲಕ ಸ್ವಾವಲಂಬಿಗಳಾಗಿ ಬದುಕಲು ಇಂತಹ ತರಬೇತಿಗಳು ಅಗತ್ಯ ಎಂದರು. ಕಾರ್ಯಕ್ರಮವನ್ನು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಸುರೇಂದ್ರ ಹೆಗ್ಡೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಮಾಹಿತಿ ನೀಡಿದರು.

ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಪೂಜಾರಿ, ಸದಸ್ಯರುಗಳಾದ ಇಬ್ರಾಹಿಂ ಕೆ. ಮಾಣಿ, ಬಾಲಕೃಷ್ಣ ಆಳ್ವ ಕೊಡಾಜೆ, ನಾರಾಯಣ ಶೆಟ್ಟಿ ತೋಟ, ಸೀತಾ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜ್ಯೋತಿ ರಾಜ್, ಬ್ಯಾಂಕ್ ಆಫ್ ಬರೋಡಾ ಮಾಣಿ ಶಾಖೆಯ  ವ್ಯವಸ್ಥಾಪಕ ಅಭಿಲಾಷ್ ಅಜಿತ್, ಬಂಟ್ವಾಳ ಆರ್ಥಿಕ ಸಾಕ್ಷರತಾ ಕೇಂದ್ರದ ಅನುಷಾ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ಪ್ರಾದೇಶಿಕ ಕಛೇರಿಯ ಆದ್ಯತೆಯ ವಿಭಾಗದ ಉಸ್ತುವಾರಿ ಶ್ರೀರಾಮ್, ಆರ್ಥಿಕ ಸೇರ್ಪಡೆ ಉಸ್ತುವಾರಿ ಪ್ರಜ್ವಲ್ ಅತಿಥಿಗಳಾಗಿ ಭಾಗವಹಿಸಿದ್ದರು.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page