August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಸಂತ್ರಸ್ಥ ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ

ಮಹಿಳೆಯೊಬ್ಬರ ಮೇಲೆ ಅತ್ಯಾಚಾರದ ಆರೋಪದ ಹಿನ್ನಲೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಖುದ್ದು ಪೊಲೀಸರೇ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದೂರಿನ ಪ್ರಕಾರ ತನ್ನ ಗಂಡನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಣ ಮಾಡಿ, ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸಿರುವುದಾಗಿದೆ. ಇದರಿಂದಾಗಿ ಹೆದರಿದ ಸಂತ್ರಸ್ಥ ಮಹಿಳೆಯು ತನಗೆ ಪರಿಚಯವಿರುವ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ನಿಗೆ ಈ ಬಗ್ಗೆ ತಿಳಿಸಿದಾಗ, ಚಂದ್ರನಾಯ್ಕ್ ನು ಸಂತ್ರಸ್ಥೆಯ ಮನೆಗೆ ಹೋಗಿ ಗಂಡನ ಮೊಬೈಲ್‌ನಲ್ಲಿದ್ದ ಪೋಟೋ ಮತ್ತು ವಿಡಿಯೋವನ್ನು ಅಳಿಸಿರುತ್ತಾನೆ.

ಆನಂತರ ಸಂತ್ರಸ್ಥೆಯ ಗಂಡನ ದುಷ್ಪ್ರೇರಣೆಯಂತೆ ಚಂದ್ರನಾಯ್ಕ್ ನು ಸಂತ್ರಸ್ಥ ಮಹಿಳೆಯೊಂದಿಗೆ ಒತ್ತಾಯ ಪೂರ್ವಕವಾಗಿ ಅವಳ ಇಚ್ಚೆಯ ವಿರುದ್ದ ದೈಹಿಕ ಸಂಪರ್ಕ ನಡೆಸಿರುತ್ತಾನೆ. ಸಂತ್ರಸ್ಥೆಯ ದೂರಿನ ಹಿನ್ನಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ಥ ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಚಂದ್ರನಾಯ್ಕ್ ನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಪ್ರಕರಣದ ತನಿಖೆ ಮುಂದುವರೆದಿದೆ.

 

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page