August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಣ್ಣ ವ್ಯಾಪಾರಿಗಳಿಗೆ GST ನೋಟಿಸ್ – ವಾಣಿಜ್ಯ ತೆರಿಗೆ ಇಲಾಖೆಯಿಂದ ಸ್ಪಷ್ಟನೆ

ಯು.ಪಿ.ಐ. ಮೂಲಕ ವಹಿವಾಟು ನಡೆಸುವ ಬೇಕರಿ, ಹೊಟೇಲ್, ಕಿರಾಣಿ ಅಂಗಡಿ, ಟೀ ಅಂಗಡಿಯಂತಹ ವ್ಯವಹಾರ ನಡೆಸುತ್ತಿರುವ ರಾಜ್ಯದ ಎಲ್ಲಾ ಸಣ್ಣಪುಟ್ಟ ವರ್ತಕರ ಮಾಹಿತಿ ಕಲೆ ಹಾಕಿರುವ ವಾಣಿಜ್ಯ ತೆರಿಗೆ ಇಲಾಖೆಯು ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿ ದಾಟಿರುವ ವರ್ತಕರಿಗೆ ಜಿ.ಎಸ್.ಟಿ. ನೋಟಿಸ್ ನೀಡಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಬಗ್ಗೆ ವಾಣಿಜ್ಯ ಇಲಾಖೆ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ.

ಪ್ರಕಟಣೆಯಲ್ಲಿ ಏನಿದೆ?

2017 ಜುಲಾಯ್ 1ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಕಲಂ 22 ರನ್ವಯ ಸರಕು ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 40 ಲಕ್ಷ ರೂಪಾಯಿಗಳನ್ನು ಮೀರಿದರೆ ಅಥವಾ ಸೇವೆಗಳ ಪೂರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 20 ಲಕ್ಷ ರೂಪಾಯಿಗಳನ್ನು ಮೀರಿದರೆ ಜಿ.ಎಸ್.ಟಿ. ನೋಂದಣಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಸಮಗ್ರ ವಹಿವಾಟಿನಲ್ಲಿ (exempted & Taxable) ಸರಕು ಮತ್ತು ಸೇವೆಗಳು ಸೇರಿರುತ್ತದೆ. ಆದರೆ ತೆರಿಗೆ ಬಾಧ್ಯತೆಯು Taxable ಸರಕುಗಳು & ಸೇವೆಗಳಿಗೆ ಮಾತ್ರ ಅನ್ವಯವಾಗುತ್ತದೆ. ತೆರಿಗೆ ಬಾದ್ಯತೆಯು ಮಾರಾಟ ಮಾಡಿದ ಸರಕುಗಳ ಪ್ರಕಾರ ನಿರ್ಧರಿಸಲ್ಪಡುತ್ತದೆ. (ಉದಾಹರಣೆಗೆ ಬ್ರೆಡ್ ಮಾರಾಟದ ಮೇಲೆ ತೆರಿಗೆ ಇರುವುದಿಲ್ಲ. ಕುರುಕುಲು ತಿಂಡಿಗಳ ಮೇಲೆ 5% ತೆರಿಗೆ ಬಾದ್ಯತೆ ಇರುತ್ತದೆ).

ವಾಣಿಜ್ಯ ತೆರಿಗೆಗಳ ಇಲಾಖೆಯು ಏಕೀಕೃತ ಪಾವತಿ ವ್ಯವಸ್ಥೆ
(ಯು.ಪಿ.ಐ)ಯ ಮೂಲಕ ವರ್ತಕರು 2021-22 ರಿಂದ 2024-25ರ ಸಾಲಿನಲ್ಲಿ ಸ್ವೀಕರಿಸಿರುವ ಹಣದ ವಿವರಗಳನ್ನು ವಿವಿಧ ಯು.ಪಿ.ಐ. ಸೇವೆಗಳ ಪೂರೈಕೆದಾರರಿಂದ ಸಂಗ್ರಹಿಸಿರುತ್ತದೆ. ವರ್ತಕರು ಮಾರಾಟದ ಹಣವನ್ನು (ಯು.ಪಿ.ಐ) ಮಾತ್ರವಲ್ಲದೇ ನಗದು ಮತ್ತು ಇತರ ವಿಧಾನಗಳಲ್ಲಿ ಕೂಡ ಪಡೆಯುತ್ತಾರೆ. ಹಾಗಾಗಿ, ಯು.ಪಿ.ಐ. ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದಿರುವ ವರ್ತಕರ ವಾರ್ಷಿಕ ವಹಿವಾಟು ಇನ್ನೂ ಗಣನೀಯವಾಗಿ ಹೆಚ್ಚಾಗಿರುತ್ತದೆ. ಸದರಿ ಮಾಹಿತಿಯನ್ನು ಪರಿಶೀಲಿಸಿ, 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017 ರಡಿಯಲ್ಲಿ ನೋಂದಣಿಯನ್ನು ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸನ್ನು ಜಾರಿಗೊಳಿಸಲಾಗಿರುತ್ತದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕಾಗಿರುತ್ತದೆ. ಇಂತಹ ವರ್ತಕರು ತಕ್ಷಣ ನೋಂದಣಿ ಪಡೆಯಬೇಕಾಗಿರುತ್ತದೆ. ವಾರ್ಷಿಕ ವಹಿವಾಟು 1.5 ಕೋಟಿ ರೂಪಾಯಿಗಳಿಗಿಂತ ಕಡಿಮೆ ಇರುವ ಸಣ್ಣ ವರ್ತಕರು ರಾಜಿ ತೆರಿಗೆಯನ್ನು ಆಯ್ಕೆ ಮಾಡಿ. ಇನ್ನು ಮುಂದೆ 1% ತೆರಿಗೆ ಪಾವತಿಸಬಹುದಾಗಿರುತ್ತದೆ. ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯ ಮಾಹಿತಿಯನ್ನು ಇಲಾಖೆಯ ಜಾಲತಾಣ https://gst.kar.nic.in/ ದಲ್ಲಿ ಪಡೆಯಬಹುದು ಎಂದು ತಿಳಿಸಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page