May 6, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ಗ್ರಾಮಾಂತರ ಠಾಣೆಯ PSI ಖೀರಪ್ಪ ಆತ್ಮಹತ್ಯೆ

ಬಂಟ್ವಾಳ ಗ್ರಾಮಾಂತರ ಠಾಣೆಯ ಕ್ರೈಮ್ ವಿಭಾಗದಲ್ಲಿ PSI ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಇಂದು ಜುಲಾಯ್ 20ರಂದು ಆದಿತ್ಯವಾರ ಸಂಜೆ ಬೆಳಕಿಗೆ ಬಂದಿದೆ. ಮೃತ ಪೊಲೀಸ್ ಅಧಿಕಾರಿಯನ್ನು ಉತ್ತರ ಕನ್ನಡ ಮೂಲದ 54 ವರ್ಷ ಪ್ರಾಯದ ಖೀರಪ್ಪ ಎಂದು ಗುರುತಿಸಲಾಗಿದೆ.

ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಅದೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶಿರಸಿ ಠಾಣೆಯಿಂದ ಕಳೆದ 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರು. ಇವರ ಕುಟುಂಬ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಇದ್ದು, ಇವರೊಬ್ಬರೇ ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.


ಅವರು ಆದಿತ್ಯವಾರ ಬೆಳಿಗ್ಗೆಯಿಂದ ಕರ್ತವ್ಯಕ್ಕೆ ಬಂದಿರಲಿಲ್ಲ. ಮೊಬೈಲ್ ಕರೆ ಮಾಡಿದರೂ ಸ್ವೀಕರಿಸದೆ ಇದ್ದ ಹಿನ್ನಲೆಯಲ್ಲಿ ಸಂಶಯಗೊಂಡ ಠಾಣಾ ಪೊಲೀಸರು ಸಂಜೆ ವೇಳೆ ಅವರು ವಾಸವಾಗಿರುವ ಬಾಡಿಗೆ ಮನೆಗೆ ಹೋಗಿ ಕರೆದರೂ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಕಿಟಕಿಯಲ್ಲಿ ನೋಡಿದಾಗ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ವಯುಕ್ತಿಕ ಹಾಗೂ ಹಣಾಕಾಸು ಸಮಸ್ಯೆಗಳಿಂದ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿ ಆ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿ, ಬಂಟ್ವಾಳ ನಗರ ಠಾಣೆಯಲ್ಲಿ UDR ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

You may also like

News

ಮುಕ್ಕ ಚೇಳ್ಯಾರು ಸಂತ ಜೋಸೆಫ್ ಪ್ರಾರ್ಥನಾ ಮಂದಿರದ ದಶಮಾನೋತ್ಸವ ಹಾಗೂ ವಾರ್ಷಿಕೋತ್ಸವ ಸಂಭ್ರಮ

“ಪ್ರಾರ್ಥನಾ ಮಂದಿರಗಳು ಮನುಷ್ಯರಲ್ಲಿ ಪ್ರೀತಿಯನ್ನು ಬಿತ್ತಬೇಕು” – ಡಾ| ಗಣೇಶ್ ಅಮಿನ್ ಸಂಕಮಾರ್ ಕಥೋಲಿಕ ತೈಲಾಗಾರ ನಿರ್ವಸಿತರ ಅಭಿವೃದ್ಧಿ ಸಮಿತಿ (ರಿ.) ಮುಕ್ಕ ಚೇಳ್ಯಾರು ಇದರ ಆಶ್ರಯದಲ್ಲಿ,
News

ಡಿಜಿಟಲ್ ಒತ್ತಡದ ನಡುವೆ ಮಾನಸಿಕ ಸಮತೋಲನ ಅಗತ್ಯ – ಆಡ್ಯಾರ್‌ನ ಸೈಂಟ್ ಲೂರ್ಡ್ಸ್ ಸಂಸ್ಥೆಯಲ್ಲಿ ಸಮ್ಮೇಳನ

ಇಂದಿನ ವೇಗದ ಡಿಜಿಟಲ್ ಜಗತ್ತಿನಲ್ಲಿ ಯುವಜನತೆ ಎದುರಿಸುತ್ತಿರುವ ಮಾನಸಿಕ ಸವಾಲುಗಳು ಮತ್ತು ಒತ್ತಡ ನಿರ್ವಹಣೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಡ್ಯಾರ್‌ನ  ಸೈಂಟ್ ಲೂರ್ಡ್ಸ್ ಇನ್ಸ್ಟಿಟ್ಯೂಶನ್ಸ್ ವತಿಯಿಂದ

You cannot copy content of this page