August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉದ್ಯೋಗ ಆಕಾಂಕ್ಷಿಗಳು ಆಳ್ವಾಸ್ ಉದ್ಯೋಗ ಮೇಳದಿಂದ ಪ್ರಯೋಜನ ಪಡೆದುಕೊಳ್ಳಿ – ಶಾಸಕ ಅಶೋಕ  ರೈ

ನುರಿತ ಉದ್ಯೋಗ ಆಕಾಂಕ್ಷಿಗಳು ಉದ್ಯೋಗ ಸಿಗುವ ಅವಕಾಶದಿಂದ ವಂಚಿತರಾಗಬಾರದು ಎಂದು ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಬೃಹತ್ ಉದ್ಯೋಗ ಮೇಳವನ್ನು ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಆಗಸ್ಟ್ 1 ಹಾಗೂ 2ರಂದು ಆಯೋಜಿಸಲಾಗಿದೆ ಎಂದು ಶಾಸಕ ಅಶೋಕ ರೈ ಅವರು ಶಾಸಕರ ಭವನದ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳದ ಬಗ್ಗೆ ರೈ ಎಸ್ಟೇಟ್ಸ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹಮ್ಮಿಕೊಂಡ ಕಾರ್ಯಾಗಾರದಲ್ಲಿ ಮಾತನಾಡಿದರು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಪುತ್ತೂರು ಶಾಸಕರ ಕಚೇರಿ ಬಳಿಯಿಂದ ಉದ್ಯೋಗ ಮೇಳಕ್ಕೆ ಕರೆದುಕೊಂಡು ಹೋಗಿ ಸಾಯಂಕಾಲ ವಾಪಸ್ಸು ಬಸ್ಸಿನಲ್ಲಿ ಕರೆದುಕೊಂಡು ಬರಲಾಗುವುದು. ಪುತ್ತೂರು ಆಸುಪಾಸಿನ ಎಲ್ಲಾ ನಿರುದ್ಯೋಗಿ ಆಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲೇಬೇಕೆಂದು 10 ಬಸ್ಸುಗಳನ್ನು ಕರೆದೊಯ್ಯಲು ಹಾಗೂ ವಾಪಸ್ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ರೈ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿಯವರು ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಪ್ರತೀ ವರ್ಷ 20 ಸಾವಿರ ಮಂದಿ ಭಾಗವಹಿಸುತ್ತಾರೆ, ವಿವಿಧ ಕಂಪೆನಿಗಳಲ್ಲಿ ಉದ್ಯೋಗ ಪಡೆದುಕೊಳ್ಳಲು ಇದು ಸುವರ್ಣವಕಾಶವಾಗಿದೆ. ಶಾಸಕರ ನೇತೃತ್ವದಲ್ಲಿ ಪುತ್ತೂರಿನಿಂದ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಅವಕಾಶವನ್ನು ಯಾರೂ ಕಳೆದುಕೊಳ್ಳಬೇಡಿ ಎಂದು ಮೂಡಬಿದ್ರೆ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ವಿವೇಕ್ ಆಳ್ವ ಹೇಳಿದರು. ಉದ್ಯೋಗ ಮೇಳದಲ್ಲಿ ಭಾಗವಹಿಸುವುದು ಮತ್ತು ಸಂದರ್ಶನವನ್ನು ಹೇಗೆ ಎದುರಿಸುವುದು ಎಂಬುದರ ಬಗ್ಗೆ ಟ್ರಸ್ಟ್ ಸದಸ್ಯರಾದ ನಿಹಾಲ್ ಪಿ. ಶೆಟ್ಟಿಯವರು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ. ಆಳ್ವ, ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ಟ್ರಸ್ಟ್ ಸದಸ್ಯರಾದ ರಿತೇಶ್ ಶೆಟ್ಟಿ ಮಂಗಳೂರು, ವಿಟ್ಲ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಉಪಸ್ಥಿತರಿದ್ದರು. ಬಾಲಕೃಷ್ಣ ಸ್ವಾಗತಿಸಿ, ಲಿಂಗಪ್ಪ ಕಾರ್ಯಕ್ರಮ ನಿರೂಪಿಸಿದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page