July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

24 ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡ ಕುಖ್ಯಾತ ಆರೋಪಿಯ ಸೆರೆ

ನ್ಯಾಯಾಲಯದ 24 ವಾರೆಂಟ್ ಇರುವ ಆರೋಪಿ ಮಹಮ್ಮದ್ ಅಬ್ದುಲ್ ಫಯಾನ್

ವಿವಿಧ 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಮಂಜನಾಡಿಯ 27 ವರ್ಷ ಪ್ರಾಯದ ಮಹಮ್ಮದ್ ಅಬ್ದುಲ್ ಫಯಾನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಮಹಮ್ಮದ್ ಅಬ್ದುಲ್ ಫಯಾನ್ ನನ್ನು ಸಿಸಿಬಿ ಪೊಲೀಸರು ಸೆರೆಹಿಡಿದಿದ್ದಾರೆ.  ಈತ ವಾಸದ ವಿಳಾಸ ಬಟ್ಯಡ್ಕ ಮನೆ, ಬದ್ರಿಯ ನಗರ, ಕಲ್ಕಟ್ಟ, ಮಂಜನಾಡಿ, ಮಂಗಳೂರು ಆಗಿದ್ದರೂ ಇಲ್ಲಿ ವಾಸವಾಗದೆ ತಲೆ ಮರೆಸಿಕೊಂಡಿದ್ದ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿನ ಪ್ರಕರಣಗಳಲ್ಲಿ ನ್ಯಾಯಾಲಯದ ಒಟ್ಟು 24 ವಾರಂಟ್ ಇದೆ. ಈತನು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ, ಪುತ್ತೂರು ನಗರ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಛೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿ ಕುಖ್ಯಾತನಾಗಿದ್ದನು. ಆರೋಪಿ ಮಹಮ್ಮದ್ ಅಬ್ದುಲ್ ಫಯಾನ್ ಮೇಲೆ ಕೇರಳ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಸಹ ಹಲವಾರು ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page