August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸರಕಾರಿ ಜಮೀನಿನಲ್ಲಿ ಅಕ್ರಮ ಹೋಲೋ ಬ್ಲಾಕ್ ಕಂಪೆನಿ ನಿರ್ಮಾಣ ಆರೋಪ

ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ತಾತ್ಕಾಲಿಕ ನೆಲೆಯಲ್ಲಿ ವಿದ್ಯುತ್ ಸಂಪರ್ಕ ಪಡೆದು ಅಕ್ರಮವಾಗಿ ನಡೆಯುತ್ತಿದ್ದ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರು ಅಗರಿ ಎಂಬಲ್ಲಿನ ಹೋಲೋ ಬ್ಲಾಕ್ ಕಂಪೆನಿ ಮೇಲೆ ಕಂದಾಯ, ಮೆಸ್ಕಾಂ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮಂಗಳೂರು ಸಹಾಯಕ ಆಯುಕ್ತರಾದ ಹರ್ಷವರ್ಧನ್ ಇವರ ನಿರ್ದೇಶನದ ಮೇಲೆ ಕಂದಾಯ, ಪಂಚಾಯತ್ ಅಧಿಕಾರಿಗಳ ತಂಡ ಜಂಟಿ ದಾಳಿ ನಡೆಸಿದೆ.

ಕಳೆದ ಎಂಟು ವರ್ಷಗಳಿಂದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸಾಲೆತ್ತೂರು ಅಗರಿ ಎಂಬಲ್ಲಿನ ಸರ್ವೇ ನಂಬರ್ 512/6 ರ ಸರ್ಕಾರಿ ಜಮೀನಿನಲ್ಲಿ ಕರಾಯಿ ಅಬ್ದುಲ್ ಕರೀಂ ಎಂಬವರು ಅಕ್ರಮವಾಗಿ ಶೆಡ್ ನಿರ್ಮಿಸಿ ಹೋಲೋ ಬ್ಲಾಕ್ ಕಂಪನಿ ನಡೆಸಿದ್ದಾರೆ. ಜಮೀನಿಗೆ ಯಾವುದೇ ದಾಖಲೆಗಳಿಲ್ಲದಿದ್ದರೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ತಾತ್ಕಾಲಿಕ ನೆಲೆಯಲ್ಲಿ ವಿದ್ಯುತ್ ನೀಡಿದ್ದಾರೆ. ಈ ಬಗ್ಗೆ ಕರಾಯಿ ಖಾಲಿದ್ ಎಂಬವರು ನೀಡಿದ ದೂರಿನನ್ವಯ ಅಧಿಕಾರಿಗಳ ತಂಡ ದಾಳಿ ನಡೆದಿದೆ.

ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ರವಿ ಎಂ.ಎನ್., ಕೊಳ್ನಾಡು ಗ್ರಾಮ ಆಡಳಿತಾಧಿಕಾರಿ ಕರಿಬಸಪ್ಪ, ಪಿ.ಡಿ.ಒ. ಲಾವಣ್ಯ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page