July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದನೆ ಚರ್ಚ್ ನಲ್ಲಿ ‘ಲಾವ್ದತೊ ಸಿ’ ಕಾರ್ಯಕ್ರಮ

ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪರಿಸರ ಕಾಳಜಿಯ ‘ಲಾವ್ದತೊ ಸಿ’ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಇಂದು ಜುಲಾಯಿ 27ರಂದು ಆದಿತ್ಯವಾರ ಆಚರಿಸಲಾಯಿತು. 2015 ರಲ್ಲಿ ಅಂದಿನ ಪೋಪ್ ಫ್ರಾನ್ಸಿಸ್ ಅವರು ನೀಡಿದ ಕರೆಯನ್ವಯ ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಚರ್ಚ್ ಗಳಲ್ಲಿ ಪರಿಸರಕ್ಕೆ ಪೂರಕವಾದ ಗಿಡಗಳನ್ನು ನೆಡುವ ಮೂಲಕ ಆಚರಿಸಿಕೊಂಡು ಬರಲಾಗುತ್ತಿದೆ.

ಪಾಲ್ದಾನೆ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾದರ್ ರಿಚ್ಚರ್ಡ್ ಅಲೋಸಿಯಸ್ ಕುವೆಲ್ಲೊರವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಗಿಡಗಳನ್ನು ನೆಡುವುದರಿಂದ ಪರಿಸರ ಸಮತೋಲನವನ್ನು ಕಾಪಾಡಿಕೊಂಡು ಬರಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಸಿ ನೆಡುವ ಮೂಲಕ ಪರಿಸರ ಪ್ರೇಮಿಗಳಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್,  ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕಿ ಜೋಸ್ಲಿನ್ ಲೋಬೊ, ಪರಿಸರ ಆಯೋಗದ ಸಂಚಾಲಕಿ ಸೆಲಿನ್ ಡಿಸೋಜ, ಮಾಜಿ ಉಪಾಧ್ಯಕ್ಷ ವಿಲಿಯಂ ಲೋಬೊ, ಆಕಾರ್ ಎಂಟರ್ ಪ್ರೈಸಸ್ ನ ಮಾಲಕ ಮೆಲ್ವಿನ್ ಡಿಸೋಜ, ಸೇಕ್ರೆಡ್ ಹಾರ್ಟ್ ವಾರ್ಡಿನ ಪ್ರತಿನಿಧಿ ರಿಚ್ಚರ್ಡ್ ಮಾರ್ಟಿಸ್, ಗಾಯನ ಮಂಡಳಿಯ ಸಂಚಾಲಕಿ  ಲಿಝೀ ಫೆರ್ನಾಂಡಿಸ್, ವಾರ್ಡಿನ ಮುಖ್ಯಸ್ಥರು, ಪ್ರತಿನಿಧಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

You may also like

News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ
News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು

You cannot copy content of this page