May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೂಡಬಿದ್ರೆ ಅಲಂಗಾರ್ ಚರ್ಚ್ ಧರ್ಮಗುರುಗಳಾದ ಫಾದರ್ ಮೆಲ್ವಿನ್ ನೊರೊನ್ಹಾರವರಿಗೆ ಮಾತೃವಿಯೋಗ

ಆಗಸ್ಟ್ 10ರಂದು ಆದಿತ್ಯವಾರ ಸಂಜೆ 4:00 ಗಂಟೆಗೆ ತಾಕೊಡೆ ಚರ್ಚ್ ನಲ್ಲಿ ಅಂತ್ಯಕ್ರಿಯೆ

ಮಂಗಳೂರು ಧರ್ಮಕ್ಷೇತ್ರದ ಮೂಡಬಿದ್ರೆ ಅಲಂಗಾರ್ ಚರ್ಚ್ ಧರ್ಮಗುರುಗಳಾದ ವಂದನೀಯ ಫಾದರ್ ಮೆಲ್ವಿನ್ ನೊರೊನ್ಹಾರವರ ತಾಯಿ 79 ವರ್ಷ ಪ್ರಾಯದ ಲೀನಾ ನೊರೊನ್ಹಾರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ತಾಕೊಡೆಯ ದಿವಂಗತ ಪೀಟರ್ ನೊರೊನ್ಹಾರವರ ಪತ್ನಿಯಾಗಿರುವ ಲೀನಾ ನೊರೊನ್ಹಾರವರು ವಂದನೀಯ ಫಾದರ್ ಮೆಲ್ವಿನ್ ನೊರೊನ್ಹಾ ಸಹಿತ ನಾಲ್ವರು ಪುತ್ರರು, ಮೂವರು ಪುತ್ರಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಫಾದರ್ ಮೆಲ್ವಿನ್ ನೊರೊನ್ಹಾರವರು ಮಂಗಳೂರು ಧರ್ಮಕ್ಷೇತ್ರದ ಅತ್ಯಂತ ಗೌರವಾನ್ವಿತ ಹಾಗೂ ಪ್ರಖ್ಯಾತ ಪ್ರಭೋದಕರಲ್ಲಿ ಒಬ್ಬರಾಗಿರುತ್ತಾರೆ. ಇವರು ಕಿನ್ನಿಗೋಳಿ, ಉಡುಪಿ, ಕುಲ್ಶೇಕರ, ಬೆಳ್ತಂಗಡಿ, ಮುಡಿಪು ಚರ್ಚ್ ಗಳಲ್ಲಿ ಸಹಾಯಕ ಧರ್ಮಗುರುಗಳಾಗಿ ಹಾಗೂ ಸೂರಿಕುಮೇರು ಬೊರಿಮಾರ್ ಮತ್ತು ಪಕ್ಷಿಕೆರೆ ಚರ್ಚ್ ಗಳಲ್ಲಿ ಪ್ರಧಾನ ಧರ್ಮಗುರುಗಳಾಗಿ ಪ್ರಸ್ತುತ ಮೂಡಬಿದ್ರೆ ಅಲಂಗಾರ್ ಚರ್ಚ್ ನಲ್ಲಿ ಪ್ರಧಾನ ಧರ್ಮಗುರುಗಳಾಗಿರುತ್ತಾರೆ.

ಆಗಸ್ಟ್ 10ರಂದು ಆದಿತ್ಯವಾರ ಸಂಜೆ 3:00 ಗಂಟೆಯಿಂದ ತಾಕೊಡೆಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ 4:00 ಗಂಟೆಗೆ ತಾಕೊಡೆ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಗಣ್ಯರ ಸಂತಾಪ:

MLC ಐವನ್ ಡಿಸೋಜ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಕೆ. ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಜೆ.ಆರ್. ಲೋಬೊ, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಶಾಸಕ ಉಮಾನಾಥ ಕೋಟ್ಯಾನ್, ಕರ್ನಾಟಕ ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಹಾಗೂ ಉದ್ಯಮಿ ಪಿಯುಸ್ ಎಲ್. ರೊಡ್ರಿಗಸ್ ಬಂಟ್ವಾಳ, MCC ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, AICU ರಾಜಾಧಕ್ಷ ಆಲ್ವಿನ್ ಡಿಸೋಜ ಪಾನೀರ್ ಸಹಿತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page