August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ – ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ

ಬಂಟ್ವಾಳ ತಾಲೂಕು ಕಚೇರಿಗೆ ಇಂದು ಆಗಸ್ಟ್ 13ರಂದು ಬುಧವಾರ ಮಧ್ಯಾಹ್ನ ಲೋಕಾಯುಕ್ತ ದಾಳಿ ನಡೆದಿದ್ದು, ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ತಹಶೀಲ್ದಾರ್ ಪಾತ್ರ ಇದೆಯೇ ಎಂಬುದನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಉಪತಹಶೀಲ್ದಾರ್ ರಾಜೇಶ್ ನಾಯ್ಕ, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ ಮಧ್ಯವರ್ತಿ ವಾಮದಪದವು ನಿವಾಸಿ ಗಣೇಶ್ ಇವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ರಾಜೇಶ್ ನಾಯ್ಕ್ – ಉಪ ತಹಶೀಲ್ದಾರ್, ಬಂಟ್ವಾಳ ತಾಲೂಕು

ಸಂತೋಷ್ ಕೇಸ್ ವರ್ಕರ್

ಗಣೇಶ್ ವಾಮದಪದವು ಬ್ರೋಕರ್

ಸಜೀಪಮುನ್ನೂರಿನ ಪುಷ್ಪರಾಜ್ ರವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಿ.ಸಿ. ರೋಡಿನ ದೇವಸ್ಥಾನವೊಂದರ ಬಳಿ ಮಧ್ಯವರ್ತಿಯ ಮೂಲಕ ಹಣ ವ್ಯವಹಾರ ನಡೆಯುವ ಸಂದರ್ಭದಲ್ಲಿ ಪ್ರಕರಣವನ್ನು ಬೇಧಿಸಲಾಗಿದೆ. ಲೋಕಾಯುಕ್ತ ಎಸ್ಪಿ ಕುಮಾರಚಂದ್ರರವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ಪಿಗಳಾದ ಗಾನಾ ಪಿ. ಕುಮಾರ್, ಸುರೇಶ್ ಕುಮಾರ್, ಇನ್ಸ್‌ಪೆಕ್ಟರ್ ಚಂದ್ರಶೇಖರ, ಭಾರತಿ ಹಾಗೂ ಸಿಬ್ಬಂದಿ ದಾಳಿ ನಡೆಸಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page