August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದನೆ ಚರ್ಚ್ ನ ಲೀಜನ್ ಆಫ್‌ ಮೇರಿ ಸಂಘಟನೆಯ 9 ನೇ ವಾರ್ಷಿಕೋತ್ಸವ ಆಚರಣೆ

ಪಾಲ್ದನೆಯ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್‌ ಮೇರಿ ಸಂಘಟನೆಯ 9ನೇ ವಾರ್ಷಿಕೋತ್ಸವವು ಚರ್ಚ್ ಸಭಾಂಗಣದಲ್ಲಿ ನಡೆಯಿತು. ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ರಿಚ್ಚರ್ಡ್ ಅಲೋಶಿಯಸ್‌ ಕುವೆಲ್ಲೊರವರು ಅಧ್ಯಕ್ಷತೆ ವಹಿಸಿ ಲೀಜನ್ ಆಫ್‌ ಮೇರಿ ಸಂಘಟನೆಯ ಸದಸ್ಯರು ನಡೆಸುತ್ತಿರುವ ಬಡ ಬಗ್ಗರ ಸೇವೆ, ಅನಾರೋಗ್ಯ ಪೀಡಿತರಿಗೆ ಸಾಂತ್ವನ, ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿನ ಕಾಳಜಿಯನ್ನು ಶ್ಲಾಘಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ರವರು ಲೀಜನ್ ಆಫ್‌ ಮೇರಿ ಸಂಘಟನೆಯ ಕಾರ್ಯ ಚಟುವಟಿಕೆಗಳನ್ನು ಕೊಂಡಾಡಿದರು. ಸಂಘಟನೆಯ ಅಧ್ಯಕ್ಷೆ ಹೆಲೆನ್ ಲೋಬೊ ಸ್ವಾಗತಿಸಿದರು. ಕಾರ್ಯದರ್ಶಿ ಜೂಡಿ ಲೋಬೊ ವರದಿ ಮಂಡಿಸಿದರು. ಉಪಾಧ್ಯಕ್ಷೆ ಜಾಯ್ಸ್ ಡಿಸೋಜ ವಂದಿಸಿದರು. ಕೋಶಾಧಿಕಾರಿ ಪ್ರೆಸಿಲ್ಲಾ ಪಿರೇರಾ ಪ್ರಾರ್ಥಿಸಿದರು. ಹಿರಿಯ ಸದಸ್ಯೆ ಸ್ಟೆಲ್ಲಾ ಮೊಂತೇರೊರವರ ಸೇವೆಯನ್ನು ಶ್ಲಾಘಿಸಿ ಸನ್ಮಾನಿಸಲಾಯಿತು.

ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕ ಜೊಸ್ಲಿನ್ ಲೋಬೊ ಉಪಸ್ಥಿತರಿದ್ದರು. ಸದಸ್ಯೆ ಫ್ಲೋಸಿ ಫೆರ್ನಾಂಡಿಸ್‌ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಭಗಿನಿ ವಿಭಾರವರು ಬಹುಮಾನ ವಿತರಿಸಿದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page