August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆರ್‌ಟಿಐ ಮಾಹಿತಿ ನೀಡದ್ದಕ್ಕೆ ನಿರ್ಮಿತಿ ಕೇಂದ್ರಕ್ಕೆ ₹50,000 ದಂಡ – ಹೈಕೋರ್ಟ್‌

ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ನಿರ್ಮಿತಿ ಕೇಂದ್ರ ಸಾರ್ವಜನಿಕ ಪ್ರಾಧಿಕಾರವಾಗಿದ್ದು, ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ವ್ಯಾಪ್ತಿಗೆ ಬರಲಿದೆ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಆರ್‌ಟಿಐ ಅಡಿ ಮಾಹಿತಿ ಒದಗಿಸಲು ನಿರಾಕರಿಸಿದ್ದ ಚಿತ್ರದುರ್ಗದ ನಿರ್ಮಿತಿ ಕೇಂದ್ರಕ್ಕೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

ಆರ್‌ಟಿಐ ಅಡಿ ಕೋರಿದ್ದ ಮಾಹಿತಿ ಒದಗಿಸುವಂತೆ ಸೂಚಿಸಿ ರಾಜ್ಯ ಮಾಹಿತಿ ಹಕ್ಕು ಆಯೋಗ ಹೊರಡಿಸಿದ್ದ ಆದೇಶ ರದ್ದು ಕೋರಿ ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ರವರ ಪೀಠ, ಮಾಹಿತಿ ಹಕ್ಕು ಕಾಯ್ದೆ ಸೆಕ್ಷನ್‌ 2 (ಎಚ್‌) ರಲ್ಲಿ ತಿಳಿಸಿರುವಂತೆ ಸರ್ಕಾರದ ಆದೇಶದ ಮೂಲಕ ರಚನೆಯಾದ ಸಂಸ್ಥೆ. ಸರ್ಕಾರದಿಂದ ನೇರ ಅಥವಾ ಪರೋಕ್ಷವಾಗಿ ಹಣಕಾಸಿನ ನೆರವು ಪಡೆಯುವ ಯಾವುದೇ ಸಂಸ್ಥೆ ಸಹ ಸಾರ್ವಜನಿಕ ಪ್ರಾಧಿಕಾರವಾಗಲಿದೆ.

ನಿರ್ಮಿತಿ ಕೇಂದ್ರ ಸರ್ಕಾರದಿಂದ ಹಣಕಾಸು ನೆರವು ಪಡೆಯುತ್ತಿದೆ ಹಾಗೂ ಸರ್ಕಾರದ ನಿಯಂತ್ರಣದಲ್ಲಿದೆ. ಆದ್ದರಿಂದ ಕೇಂದ್ರವು ಆರ್‌ಟಿಐ ಅಡಿ ಮಾಹಿತಿ ನೀಡಬೇಕು. ಮಾಹಿತಿ ನೀಡದ ಕ್ರಮ ಒಪ್ಪಲಾಗದು ಎಂದು ತಿಳಿಸಿರುವ ನ್ಯಾಯಪೀಠವು 50 ಸಾವಿರ ರೂಪಾಯಿ ದಂಡದ ಮೊತ್ತವನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಲು ಸೂಚಿಸಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page