July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ICYM ಕೊಲ್ಲಂಗಾನ ಘಟಕದಿಂದ ಸೂಚಕ ಫಲಕ ಶುದ್ಧೀಕರಣ ಕಾರ್ಯ

ಭಾರತೀಯ ಕಥೊಲಿಕ್ ಯುವ ಸಂಚಾಲನ (ICYM) ಕೊಲ್ಲಂಗಾನ ಘಟಕ ಇದರ ವತಿಯಿಂದ ಆಗಸ್ಟ್ 17ರಂದು ಭಾನುವಾರ ಬೆಳಿಗ್ಗೆ ಬಿ.ಸಿ. ರೋಡ್ ಕಲೆಕ್ಟರೇಟ್‌ನಿಂದ ಮಾನ್ಯವರೆಗೆ ಸೂಚಕ ಫಲಕ ಶುಚಿಗೊಳಿಸುವ ಕಾರ್ಯಕ್ರಮ ನಡೆಯಿತು. ಸುಮಾರು 20 ಮಂದಿ ಸದಸ್ಯರು ಪಾಲ್ಗೊಂಡ ಈ ಕಾರ್ಯದಲ್ಲಿ ಹಾಳಾಗಿದ್ದ ಫಲಕಗಳನ್ನು ದುರಸ್ತಿ ಮಾಡಿ, ರಸ್ತೆಯ ಬದಿಯ ಸೂಚಕ ಫಲಕಗಳನ್ನು ಸ್ವಚ್ಛಗೊಳಿಸಲಾಯಿತು.

ಕೊಲ್ಲಂಗಾನ ಸಂತ ತೋಮಸ್ ಚರ್ಚ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಆರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾದರ್ ರಿತೇಶ್ ರೊಡ್ರಿಗಸ್ ಎಲ್ಲರನ್ನೂ ಸ್ವಾಗತಿಸಿ ಸುಚಿತ್ವ ಕಾರ್ಯಕ್ರಮವನ್ನು ಕೈಗೊಂಡ ICYM ಕೊಲ್ಲಂಗಾನ ಘಟಕದ ಅಧ್ಯಕ್ಷ ಹಾಗೂ ಎಲ್ಲಾ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಚರ್ಚ್ ನ ಪಾಲನಾ ಸಮಿತಿಯ ಕಾರ್ಯದರ್ಶಿ ಸುನಿಲ್ ಡಿಸೋಜ ಧನ್ಯವಾದಗಳನ್ನು ಸಲ್ಲಿಸಿದರು. ಈ ಸ್ವಚ್ಛತಾ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page